HomeIndiaಇನ್ನು 2-3 ದಿನಗಳಲ್ಲಿ ಕೇರಳಕ್ಕೆ ನೈರುತ್ಯ ಮುಂಗಾರು ಪ್ರವೇಶ: ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ

ಇನ್ನು 2-3 ದಿನಗಳಲ್ಲಿ ಕೇರಳಕ್ಕೆ ನೈರುತ್ಯ ಮುಂಗಾರು ಪ್ರವೇಶ: ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ

ನವದೆಹಲಿ: ಮುಂದಿನ ಎರಡು ಮೂರು ದಿನಗಳಲ್ಲಿ ನೈರುತ್ಯ ಮುಂಗಾರು ಕೇರಳಕ್ಕೆ ಪ್ರವೇಶಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಮೊದಲು ಮೇ 26ಕ್ಕೆ ಮುಂಗಾರು ಕೇರಳ ಪ್ರವೇಶಿಸುವುದಾಗಿ ಹೇಳಲಾಗಿತ್ತು.

ಮುಂದಿನ ಎರಡು ಮೂರು ದಿನಗಳಲ್ಲಿ ನೈರುತ್ಯ ಮುಂಗಾರು ಕೇರಳಕ್ಕೆ ಆಗಮಿಸುವ ನಿರೀಕ್ಷೆ ಇದೆ. ನೈರುತ್ಯ ಮತ್ತು ಆಗ್ನೇಯ ಅರಬ್ಬಿ ಸಮುದ್ರ, ಲಕ್ಷ ದ್ವೀಪ, ಕೇರಳ ಮತ್ತು ತಮಿಳುನಾಡಿನ ಕೆಲವು ಭಾಗಗಳಲ್ಲಿ ಮುಂಗಾರು ಮುಂದುವರಿಯಲು ಪರಿಸ್ಥಿತಿ ಅನುಕೂಲಕರವಾಗಿದೆ ಎಂದು ಭಾರತೀಯ ಹವಮಾನ ಇಲಾಖೆ ತಿಳಿಸಿದೆ.

ಸಾಮಾನ್ಯವಾಗಿ ಜೂನ್ 1ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸುತ್ತದೆ. ಆದರೆ ಈ ವರ್ಷ ಮೇ 26ಕ್ಕೆ ಪ್ರವೇಶಿಸಲಿದೆ ಎಂದು ಅಂದಾಜಿಸಲಾಗಿತ್ತು. ಇದೀಗ ಇನ್ನು ಎರಡು ಮೂರು ದಿನ ತಡವಾಗಿ ಮುಂಗಾರು ಆಗಮನವಾಗಲಿದೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular