HomeKarnataka'ಸೌಜನ್ಯ ಕೇಸ್' ಸಿಎಂ ಡಿ.ಕೆ ಶಿವಕುಮಾರ್ ಗಮನಕ್ಕೆ ತರ್ತೇನೆ ; ಗೃಹ ಸಚಿವ ಪ್ರಿಯಾಂಕ್ ಖರ್ಗೆ

‘ಸೌಜನ್ಯ ಕೇಸ್’ ಸಿಎಂ ಡಿ.ಕೆ ಶಿವಕುಮಾರ್ ಗಮನಕ್ಕೆ ತರ್ತೇನೆ ; ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಸೌಜನ್ಯ ಕೊಲೆ ಪ್ರಕರಣದ ಮರುತನಿಖೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ನ ಅಧಿಕೃತ ಆದೇಶ ಇನ್ನೂ ಹೊರಬಂದಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಮಾಧ್ಯಮಗಳಲ್ಲಿ ಈ ಕುರಿತು ವರದಿಗಳು ಬಂದಿದ್ದು, ಅಧಿಕೃತ ಆದೇಶ ಬಂದ ಬಳಿಕ ಅದರ ಸಂಪೂರ್ಣ ವಿವರಗಳನ್ನು ಪರಿಶೀಲಿಸಲಾಗುವುದು ಎಂದು ಹೇಳಿದ್ದಾರೆ.

ಈ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ಮುಖ್ಯಮಂತ್ರಿ ಅವರ ಗಮನಕ್ಕೆ ತಂದು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಸೌಜನ್ಯ ಪ್ರಕರಣದ ತನಿಖೆ ಈ ಹಿಂದೆ ಸಿಐಡಿ ಹಾಗೂ ಸಿಬಿಐ ಮೂಲಕ ನಡೆದಿತ್ತು. ಸುಪ್ರೀಂಕೋರ್ಟ್‌ನ ಇಂದಿನ ವಿಚಾರಣೆಯ ಕುರಿತು ಮಾತನಾಡಿದ ಖರ್ಗೆ, ಪ್ರಕರಣದ ತನಿಖೆ ಸರಿಯಾಗಿ ನಡೆದಿಲ್ಲ ಎಂಬ ವಿಚಾರವಾಗಿ ನ್ಯಾಯಾಲಯವು ಸಿಬಿಐ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವುದಾಗಿ ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಪ್ರಕರಣ ಅತ್ಯಂತ ಸೂಕ್ಷ್ಮವಾಗಿರುವುದರಿಂದ, ಸುಪ್ರೀಂಕೋರ್ಟ್‌ನ ಅಧಿಕೃತ ಆದೇಶ ಹೊರಬರುವ ಮುನ್ನ ಯಾವುದೇ ಅಂತಿಮ ಹೇಳಿಕೆ ನೀಡುವುದು ಸರಿಯಲ್ಲ ಎಂದು ಅವರು ಹೇಳಿದ್ದಾರೆ. ಅಧಿಕೃತ ಆದೇಶ ಬಂದ ಬಳಿಕ ಅದನ್ನು ಪರಿಶೀಲಿಸಿ ಮಾತನಾಡುತ್ತೇನೆ; ಇಲ್ಲವಾದರೆ ತಪ್ಪು ಸಂದೇಶ ರವಾನೆಯಾಗುವ ಸಾಧ್ಯತೆಯಿದೆ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಬರ, ಪ್ರವಾಹ ಹಾಗೂ ಬೆಳೆ ಹಾನಿ

ಕಲಬುರಗಿ: ಬರ, ಪ್ರವಾಹ ಹಾಗೂ ಬೆಳೆ ಹಾನಿ ಸೇರಿದಂತೆ ಹಲವು ಸವಾಲುಗಳ ನಡುವೆಯೂ ಕಲಬುರಗಿ ಜಿಲ್ಲೆಯ ಕೃಷಿ ಕ್ಷೇತ್ರಕ್ಕೆ ಸರ್ಕಾರದ ಬೆಂಬಲ ನಿರಂತರವಾಗಿದೆ. ರೈತರ ನೆರವಿಗಾಗಿ ಕೈಗೊಂಡ ವಿವಿಧ ಕ್ರಮಗಳಿಂದ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗಳಿಗೆ ಉತ್ತೇಜನ ದೊರೆತಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

8 ಲಕ್ಷ ಹೆಕ್ಟೇರ್‌ನಲ್ಲಿ ಬಿತ್ತನೆ

ಜಿಲ್ಲೆಯಲ್ಲಿ 8.90 ಲಕ್ಷ ಹೆಕ್ಟೇರ್ ಬಿತ್ತನೆ ಗುರಿ ನಿಗದಿಪಡಿಸಲಾಗಿದ್ದು, ಈ ಪೈಕಿ 8 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಲಾಗಿದೆ.ಅದೇ ರೀತಿ, 4.53 ಲಕ್ಷ ರೈತರು 5.36 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ಬೆಳೆ ವಿಮೆ ನೋಂದಣಿ ಮಾಡಿಕೊಂಡಿದ್ದಾರೆ. ರಾಜ್ಯದಲ್ಲೇ ಬೆಳೆ ವಿಮೆ ನೋಂದಣಿಯಲ್ಲಿ ಕಲಬುರಗಿ ಜಿಲ್ಲೆ ಮೊದಲ ಸ್ಥಾನದಲ್ಲಿದೆ ಎಂದು ತಿಳಿಸಲಾಗಿದೆ.

ಒಂದೇ ವರ್ಷದಲ್ಲಿ ₹1,083 ಕೋಟಿ ಪರಿಹಾರ

ಕಳೆದ ವರ್ಷ ಕಲಬುರಗಿ ಜಿಲ್ಲೆಯ ರೈತರಿಗೆ ವಿವಿಧ ರೂಪದಲ್ಲಿ ಭಾರಿ ಪ್ರಮಾಣದ ಪರಿಹಾರ ಮತ್ತು ನೆರವು ದೊರೆತಿದೆ.

  • ಬೆಳೆ ವಿಮೆ ಪರಿಹಾರ: ₹585 ಕೋಟಿ

  • SDRF/NDRF ಪ್ರವಾಹ ಪರಿಹಾರ: ₹250 ಕೋಟಿ

  • ರಾಜ್ಯ ವಿಶೇಷ ಪ್ಯಾಕೇಜ್: ₹248.73 ಕೋಟಿ

ಒಟ್ಟಾರೆ ಒಂದೇ ವರ್ಷದಲ್ಲಿ ಕಲಬುರಗಿ ಜಿಲ್ಲೆಯ ರೈತರಿಗೆ ₹1,083 ಕೋಟಿ ಪರಿಹಾರ ನೀಡಲಾಗಿದೆ ಎಂದು ಸರ್ಕಾರದ ಮಾಹಿತಿ ತಿಳಿಸುತ್ತದೆ.

ಕೃಷಿ ಯಂತ್ರೋಪಕರಣ, ಡ್ರೋನ್ ಸಿಂಪಡಣೆಗೆ ಉತ್ತೇಜನ

ರೈತರ ಕೃಷಿ ಚಟುವಟಿಕೆಗಳಿಗೆ ನೆರವಾಗಲು ಜಿಲ್ಲೆಯಲ್ಲಿ ಡ್ರೋನ್ ಸಿಂಪರಣೆ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಬಿತ್ತನೆ ಮತ್ತು ಕೊಯ್ಲು ಸೇರಿದಂತೆ ಕೃಷಿ ಕಾರ್ಯಗಳನ್ನು ಸುಲಭಗೊಳಿಸುವ ಉದ್ದೇಶದಿಂದ 9 ಕೃಷಿ ಯಂತ್ರಧಾರೆ ಕೇಂದ್ರಗಳನ್ನು ಸಹ ಸ್ಥಾಪಿಸಲಾಗಿದೆ.

ಕಳೆದ ಮೂರು ವರ್ಷಗಳಲ್ಲಿ 15.47 ಲಕ್ಷ ರೈತರಿಗೆ ₹3,035.16 ಕೋಟಿ ಮೊತ್ತದ ಬೆಳೆ ವಿಮೆ, ಬೆಳೆ ಹಾನಿ ಪರಿಹಾರ, ನೆಟೆ ರೋಗ ಹಾಗೂ ಕನಿಷ್ಠ ಬೆಂಬಲ ಬೆಲೆ (MSP) ಸೇರಿದಂತೆ ವಿವಿಧ ನೆರವು ನೀಡಲಾಗಿದೆ ಎಂದು ತಿಳಿಸಲಾಗಿದೆ.

ರೊಟ್ಟಿ, ಬೇಳೆಕಾಳುಗಳ ಮೌಲ್ಯವರ್ಧನೆಗೆ ಒತ್ತು

ಕಲಬುರಗಿಯ ಪ್ರಸಿದ್ಧ ರೊಟ್ಟಿ ಮತ್ತು ಬೇಳೆಕಾಳುಗಳ ಮೌಲ್ಯವರ್ಧನೆಗೆ ಉತ್ತೇಜನ ನೀಡುವ ಮೂಲಕ ಕೃಷಿ ಉತ್ಪನ್ನಗಳಿಗೆ ಹೆಚ್ಚಿನ ಮೌಲ್ಯ ಕಲ್ಪಿಸಿ, ರೈತರ ಆದಾಯ ಹೆಚ್ಚಿಸುವ ಪ್ರಯತ್ನ ನಡೆಸಲಾಗುತ್ತಿದೆ.

ಸ್ಥಳೀಯ ಮಟ್ಟದಲ್ಲೇ ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಮಾಡುವ ಮೂಲಕ ಕಲಬುರಗಿ ಜಿಲ್ಲೆಯ ಕೃಷಿಗೆ ಹೊಸ ಬಲ ನೀಡುವುದು ಹಾಗೂ ರೈತರ ಆದಾಯಕ್ಕೆ ಹೊಸ ಮಾರ್ಗಗಳನ್ನು ಸೃಷ್ಟಿಸುವ ಗುರಿಯನ್ನು ಸರ್ಕಾರ ಹೊಂದಿದೆ. ರೈತರ ಬೆವರಿನ ಪ್ರತಿ ಹನಿಗೂ ಬೆಲೆ ಸಿಗಬೇಕು ಹಾಗೂ ಕಲಬುರಗಿ ಸಮೃದ್ಧಿಯತ್ತ ಸಾಗಬೇಕು ಎಂಬ ದೃಷ್ಟಿಯಿಂದ ಸರ್ಕಾರದ ಪ್ರಯತ್ನಗಳು ಮುಂದುವರಿಯಲಿವೆ ಎಂದು ತಿಳಿಸಲಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular