HomeKarnatakaಬಿಜೆಪಿ ಶಾಸಕಿ ಪರ ಪ್ರಚಾರ: ಪೊಲೀಸರ ವಿರುದ್ದ ಕ್ರಮ

ಬಿಜೆಪಿ ಶಾಸಕಿ ಪರ ಪ್ರಚಾರ: ಪೊಲೀಸರ ವಿರುದ್ದ ಕ್ರಮ

ಚಿತ್ರದುರ್ಗ: ಹಿರಿಯೂರು ಶಾಸಕಿ ಪೂರ್ಣಿಮಾ ಅವರ ಪರವಾಗಿ ಚುನಾವಣೆ ಪ್ರಚಾರ ಮಾಡುತ್ತಿದ್ದ ಆರೋಪದ ಮೇಲೆ ನಾಲ್ವರು ಪೊಲೀಸರನ್ನು ವರ್ಗಾವಣೆ ಮಾಡಲಾಗಿದೆ.

ಚಿತ್ರದುರ್ಗ ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ. ಪರಶುರಾಮ್ ಪೊಲೀಸರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಹಿರಿಯೂರು ಠಾಣೆಯ ಪೊಲೀಸ್ ಕಾನ್ಸ್ಟೇಬಲ್ ಶಿವಮೂರ್ತಿ, ಫಿರ್ದೋಸ್, ತಿಮ್ಮೇಶ್ ತಿಮ್ಮರಾಯಪ್ಪ, ಮೌನೇಶ್ವರ ಅವರು ಬಿಜೆಪಿ ಪರ ಪ್ರಚಾರದಲ್ಲಿ ತೊಡಗಿದ್ದಾರೆ ಎಂದು ಬ್ಲಾಕ್ ಹಿರಿಯೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಈರಲಿಂಗೇಗೌಡ ಚುನಾವಣಾಧಿಕಾರಿಗೆ ದೂರು ನೀಡಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದನ್ನು ಗಂಭೀರವಾಗಿ ಪರಿಗಣಿಸಿದ ಎಸ್.ಪಿ. ಪರಶುರಾಮ್ ನಾಲ್ವರನ್ನು ಹಿರಿಯೂರು ವಿಧಾನಸಭೆ ಕ್ಷೇತ್ರದ ಹೊರಗೆ ಇರುವ ಠಾಣೆಗಳಿಗೆ ವರ್ಗಾವಣೆ ಮಾಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular