HomeLatest NewsBREAKING: ಬಳ್ಳಾರಿ ಗಲಾಟೆ-ಫೈರಿಂಗ್ ಪ್ರಕರಣ: ಸಸ್ಪೆಂಡ್ ಆಗಿದ್ದ ಎಸ್ ಪಿ ಪವನ್ ನಜ್ಜೂರ್ ಆತ್ಮಹತ್ಯೆಗೆ ಯತ್ನ

BREAKING: ಬಳ್ಳಾರಿ ಗಲಾಟೆ-ಫೈರಿಂಗ್ ಪ್ರಕರಣ: ಸಸ್ಪೆಂಡ್ ಆಗಿದ್ದ ಎಸ್ ಪಿ ಪವನ್ ನಜ್ಜೂರ್ ಆತ್ಮಹತ್ಯೆಗೆ ಯತ್ನ

ತುಮಕೂರು: ಬಳ್ಳಾರಿಯಲ್ಲಿ ನಡೆದಿದ್ದ ಫೈರಿಂಗ್ ಪ್ರಕರಣದಲ್ಲಿ ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ಸಸ್ಪೆಂಡ್ ಆಗಿದ್ದ ಎಸ್ ಪಿ ಪವನ್ ನಜ್ಜೂರ್ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.

ಬಳ್ಳಾರಿ ಎಸ್ ಪಿಯಾಗಿ ಅಧಿಕಾರ ವಹಿಸಿಕೊಂಡಿದ್ದ ಒಂದೇ ದಿನದಲ್ಲಿ ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರವಾಗಿ ಗಲಾಟೆ ನಡೆದು ಫೈರಿಂಗ್ ನಲ್ಲಿ ಕಾಂಗ್ರೆಸ್ ಕಾರ್ಯಕರ್ತ ಸಾವನ್ನಪ್ಪಿದ್ದ. ಈ ಘಟನೆ ಬೆನ್ನಲ್ಲೇ ಒಂದೇ ದಿನದಲ್ಲಿ ಎಸ್ ಪಿ ಪವನ್ ನಜ್ಜೂರ್ ಅವರನ್ನು ರಾಜ್ಯ ಸರ್ಕಾರ ಅಮಾನತುಗೊಳಿಸಿ ಆದೇಶ ಹೊರಡಿಸಿತ್ತು.

ಅಮಾನತು ಬೆನ್ನಲ್ಲೇ ತೀವ್ರವಾಗಿ ಮನನೊಂದಿದ್ದ ಪವನ್ ನಜ್ಜೂರ್, ತುಮಕೂರಿಗೆ ಹೋಗಿದ್ದರು. ಅಲ್ಲಿ ತನ್ನ ಸೇಹಿತನ ಫಾರ್ಮ್ ಹೌಸ್ ಗೆ ಹೋಗಿ ನಿದ್ರೆಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ತಿಳಿದುಬಂದಿದೆ. ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular