ಬಳ್ಳಾರಿಯ ಖಾಸಗಿ ಹೋಟೆಲ್ ಸ್ಪಾ ಸೆಂಟರ್ ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿರುವ ಖಚಿತ ಮಾಹಿತಿ ಆಧರಿಸಿ ಎಸ್‍ಪಿ ಶೋಭಾರಾಣಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.
ದಾಳಿಯ ಸಂದರ್ಭದಲ್ಲಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಮೂವರು ಮಹಿಳೆಯರು ಮತ್ತು ಪುರುಷರನ್ನು ವಶಕ್ಕೆ ಪಡೆಯಲಾಗಿದೆ. ಮೂವರು ಮಹಿಳೆಯರು ಹೊರ ರಾಜ್ಯದವರಾಗಿದ್ದಾರೆ. ಅಸ್ಸಾಂ ಮತ್ತು ಮಣಿಪುರ ಮೂಲದ ಮಹಿಳೆಯರು, ರಾಜ್ಯದ ಬಳ್ಳಾರಿಯ ಇಬ್ಬರು ಮತ್ತು ಗಂಗಾವತಿಯ ಮತ್ತೊಬ್ಬ ವ್ಯಕ್ತಿಯನ್ನು ಪೋಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಬಳ್ಳಾರಿಯ ಮತ್ತೊಂದು ಹೋಟೆಲ್ ಮೇಲೆಯೂ ಪೊಲೀಸರು ದಾಳಿ ನಡೆಸಿದ್ದಾರೆ. ಯಾವುದೇ ಅಕ್ರಮ ಚಟುವಟಿಕೆ ಇಲ್ಲದ ಹಿನ್ನೆಲೆಯಲ್ಲಿ ಎಸ್ಪಿ ನೇತೃತ್ವದ ಪೊಲೀಸರ ತಂಡ ವಾಪಸ್ ಆಗಿದೆ. ಗಾಂಧಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.