HomeLatest Newsಹೋಟೆಲ್ ಮೇಲೆ ದಾಳಿ: ವೇಶ್ಯಾವಾಟಿಕೆಯಲ್ಲಿ ತೊಡಗಿದ್ದವರು ವಶಕ್ಕೆ

ಹೋಟೆಲ್ ಮೇಲೆ ದಾಳಿ: ವೇಶ್ಯಾವಾಟಿಕೆಯಲ್ಲಿ ತೊಡಗಿದ್ದವರು ವಶಕ್ಕೆ

ಬಳ್ಳಾರಿಯ ಖಾಸಗಿ ಹೋಟೆಲ್ ಸ್ಪಾ ಸೆಂಟರ್ ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿರುವ ಖಚಿತ ಮಾಹಿತಿ ಆಧರಿಸಿ ಎಸ್‍ಪಿ ಶೋಭಾರಾಣಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

ದಾಳಿಯ ಸಂದರ್ಭದಲ್ಲಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಮೂವರು ಮಹಿಳೆಯರು ಮತ್ತು ಪುರುಷರನ್ನು ವಶಕ್ಕೆ ಪಡೆಯಲಾಗಿದೆ. ಮೂವರು ಮಹಿಳೆಯರು ಹೊರ ರಾಜ್ಯದವರಾಗಿದ್ದಾರೆ. ಅಸ್ಸಾಂ ಮತ್ತು ಮಣಿಪುರ ಮೂಲದ ಮಹಿಳೆಯರು, ರಾಜ್ಯದ ಬಳ್ಳಾರಿಯ ಇಬ್ಬರು ಮತ್ತು ಗಂಗಾವತಿಯ ಮತ್ತೊಬ್ಬ ವ್ಯಕ್ತಿಯನ್ನು ಪೋಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಬಳ್ಳಾರಿಯ ಮತ್ತೊಂದು ಹೋಟೆಲ್ ಮೇಲೆಯೂ ಪೊಲೀಸರು ದಾಳಿ ನಡೆಸಿದ್ದಾರೆ. ಯಾವುದೇ ಅಕ್ರಮ ಚಟುವಟಿಕೆ ಇಲ್ಲದ ಹಿನ್ನೆಲೆಯಲ್ಲಿ ಎಸ್ಪಿ ನೇತೃತ್ವದ ಪೊಲೀಸರ ತಂಡ ವಾಪಸ್ ಆಗಿದೆ. ಗಾಂಧಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular