HomeKarnatakaBREAKING : ಸ್ಪೀಕರ್ ಯು.ಟಿ. ಖಾದರ್ ಸಿಟ್ಟಿಗೆ ಮೂವರು ಸರ್ಕಾರಿ ಅಧಿಕಾರಿಗಳ ತಲೆದಂಡ..!

BREAKING : ಸ್ಪೀಕರ್ ಯು.ಟಿ. ಖಾದರ್ ಸಿಟ್ಟಿಗೆ ಮೂವರು ಸರ್ಕಾರಿ ಅಧಿಕಾರಿಗಳ ತಲೆದಂಡ..!

ಬೆಂಗಳೂರು: ವಿಧಾನ ಸಭೆಯ ಅಧಿವೇಶನದಲ್ಲಿ ಕೇಳಲಾದ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡುವಲ್ಲಿ ವಿಫಲರಾದ ಮತ್ತು ಕರ್ತವ್ಯ ನಿರ್ಲಕ್ಷ್ಯ ತೋರಿದ ಹಿನ್ನೆಲೆಯಲ್ಲಿ ಮೂವರು ಸರ್ಕಾರಿ ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ.

ಹೌದು.. ವಿಧಾನ ಸಭೆಯ ಅಧಿವೇಶನದಲ್ಲಿ ನಿರ್ಲಕ್ಷ್ಯ ತೋರಿದ ಮತ್ತು ಕೇಳಲಾದ ಪ್ರಶ್ನೆಗಳಿಗೆ ಸಮರ್ಪಕ ಮಾಹಿತಿ ನೀಡದ ಅಧಿಕಾರಿಗಳ ವಿರುದ್ಧ ರಾಜ್ಯ ಸರ್ಕಾರ ಚಾಟಿ ಬೀಸಿದೆ. ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅವರ ತೀವ್ರ ಅಸಮಾಧಾನದ ಬೆನ್ನಲ್ಲೇ, ಕರ್ತವ್ಯ ಲೋಪ ಎಸಗಿದ ಮೂವರು ಹಿರಿಯ ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಡಕ್ ಸೂಚನೆ ನೀಡಿದ್ದಾರೆ. ಕಂದಾಯ, ಲೋಕೋಪಯೋಗಿ (PWD) ಮತ್ತು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಈ ಅಧಿಕಾರಿಗಳು ಸದನದ ಗಂಭೀರತೆಯನ್ನು ಕಡೆಗಣಿಸಿದ್ದಕ್ಕೆ ಈ ಕಠಿಣ ಶಿಕ್ಷೆ ವಿಧಿಸಲಾಗಿದ್ದು, ಇಲಾಖೆಯ ಹಿರಿಯ ಅಧಿಕಾರಿಗಳಿಗೂ ನೋಟಿಸ್ ಜಾರಿ ಮಾಡಲಾಗಿದೆ. ಈ ಹಠಾತ್ ಕ್ರಮವು ಸರ್ಕಾರಿ ಅಧಿಕಾರಿಗಳ ವಲಯದಲ್ಲಿ ಸಂಚಲನ ಮೂಡಿಸಿದೆ.

ಅಮಾನತುಗೊಂಡ ಇಲಾಖೆಗಳು: ಕಂದಾಯ ಇಲಾಖೆ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಹಾಗೂ ಲೋಕೋಪಯೋಗಿ (PWD) ಇಲಾಖೆಯ ತಲಾ ಒಬ್ಬ ಅಧಿಕಾರಿ ಅಮಾನತುಗೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸ್ಪೀಕರ್ ಅಸಮಾಧಾನ: ಅಧಿವೇಶನದ ವೇಳೆ ಶಾಸಕರು ಕೇಳಿದ ಪ್ರಶ್ನೆಗಳಿಗೆ ಇಲಾಖೆಗಳಿಂದ ಸೂಕ್ತ ಮತ್ತು ನಿಖರವಾದ ಮಾಹಿತಿ ಒದಗಿಸದ ಕಾರಣ ಸ್ಪೀಕರ್ ಯು.ಟಿ. ಖಾದರ್ ಅವರು ತೀವ್ರ ಅಸಮಾಧಾನ ಮತ್ತು ಆಕ್ರೋಶ ವ್ಯಕ್ತಪಡಿಸಿದ್ದರು.ಸ್ಪೀಕರ್ ಅವರ ಆಕ್ರೋಶದ ಬೆನ್ನಲ್ಲೇ ಕಾರ್ಯಪ್ರವೃತ್ತರಾದ ಮುಖ್ಯಮಂತ್ರಿಗಳು, ಸದನಕ್ಕೆ ತಪ್ಪು ಮಾಹಿತಿ ನೀಡುವ ಅಥವಾ ಮಾಹಿತಿ ನೀಡಲು ವಿಳಂಬ ಮಾಡುವ ಅಧಿಕಾರಿಗಳನ್ನು ಸಹಿಸುವುದಿಲ್ಲ ಎಂದು ಎಚ್ಚರಿಸಿ ಈ ಕ್ರಮ ಕೈಗೊಂಡಿದ್ದಾರೆ.

ನೋಟಿಸ್ ಜಾರಿ: ಅಮಾನತುಗೊಂಡ ಅಧಿಕಾರಿಗಳಲ್ಲದೆ, ಆಯಾ ಇಲಾಖೆಗಳ ಹಿರಿಯ ಅಧಿಕಾರಿಗಳಿಗೂ ಈ ಕುರಿತು ವಿವರಣೆ ಕೋರಿ ನೋಟಿಸ್ ಜಾರಿ ಮಾಡಲಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular