HomeKarnatakaಶಿಷ್ಟಾಚಾರ ಮರೆತ ಸ್ಪೀಕರ್ ಯು.ಟಿ. ಖಾದರ್: ಕಾಂಗ್ರೆಸ್ ವರಿಷ್ಠರ ಭೇಟಿ

ಶಿಷ್ಟಾಚಾರ ಮರೆತ ಸ್ಪೀಕರ್ ಯು.ಟಿ. ಖಾದರ್: ಕಾಂಗ್ರೆಸ್ ವರಿಷ್ಠರ ಭೇಟಿ

ಬೆಂಗಳೂರು: ಸಭಾಧ್ಯಕ್ಷರು ಮತ್ತು ಉಪ ಸಭಾಧ್ಯಕ್ಷರಾಗಿ ಆಯ್ಕೆಯಾದವರು ಪಕ್ಷದ ಚಟುವಟಿಕೆಯಿಂದ ದೂರ ಇರುತ್ತಾರೆ. ಆದರೆ, ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್ ಮತ್ತು ವಿಧಾನಸಭೆ ಉಪಾಧ್ಯಕ್ಷ ರುದ್ರಪ್ಪ ಲಮಾಣಿ ಅವರು ಕಾಂಗ್ರೆಸ್ ವರಿಷ್ಠರನ್ನು ಭೇಟಿಯಾಗಿರುವುದು ಚರ್ಚೆಗೆ ಕಾರಣವಾಗಿದೆ.

ಬೆಂಗಳೂರಿನಲ್ಲಿ ನಡೆಯುತ್ತಿರುವ ವಿರೋಧ ಪಕ್ಷಗಳ ನಾಯಕರ ಸಭೆಯಲ್ಲಿ ಭಾಗವಹಿಸಲು ತಾಜ್ ವೆಸ್ಟ್ ಎಂಡ್ ಹೋಟೆಲ್ ಗೆ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಸೇರಿದಂತೆ ಎಐಸಿಸಿ ನಾಯಕರು ಆಗಮಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅವರನ್ನು ಸ್ಪೀಕರ್ ಯು.ಟಿ. ಖಾದರ್ ಮತ್ತು ಡೆಪ್ಯೂಟಿ ಸ್ಪೀಕರ್ ರುದ್ರಪ್ಪ ಲಮಾಣಿ ಭೇಟಿ ಮಾಡಿರುವುದು ಚರ್ಚೆಗೆ ಕಾರಣವಾಗಿದೆ. ಶಿಷ್ಟಾಚಾರ ಮರೆತು ಕಾಂಗ್ರೆಸ್ ನಾಯಕರನ್ನು ಭೇಟಿಯಾಗಿದ್ದಾರೆ ಎನ್ನಲಾಗಿದೆ.

ತಾಜ್ ವೆಸ್ಟ್ ಎಂಡ್ ನಲ್ಲಿ ತಂಗಿರುವ ಕಾಂಗ್ರೆಸ್ ನಾಯಕರನ್ನು ರಾಜ್ಯದ ಸಚಿವರಾದ ಜಿ. ಪರಮೇಶ್ವರ್, ಎಂ.ಬಿ. ಪಾಟೀಲ, ಹೆಚ್.ಕೆ. ಪಾಟೀಲ, ಕೆ.ಹೆಚ್. ಮುನಿಯಪ್ಪ, ಸತೀಶ್ ಜಾರಕಿಹೊಳಿ, ದಿನೇಶ್ ಗುಂಡೂರಾವ್ ಮೊದಲಾದವರು ಭೇಟಿಯಾಗಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular