HomeLatest NewsBREAKING : ಸ್ಪೀಕರ್ ಯು.ಟಿ. ಖಾದರ್ ಗೆ 'ಅಂಡರ್ ವರ್ಲ್ಡ್ ನಿಂದ' ಜೀವ ಬೆದರಿಕೆ.!

BREAKING : ಸ್ಪೀಕರ್ ಯು.ಟಿ. ಖಾದರ್ ಗೆ ‘ಅಂಡರ್ ವರ್ಲ್ಡ್ ನಿಂದ’ ಜೀವ ಬೆದರಿಕೆ.!

ಬೀದರ್: ಅಂಡರ್ ವರ್ಲ್ಡ್ ನಿಂದ ನನಗೆ ಜೀವ ಬೆದರಿಕೆ ಕರೆಗಳು ಬಂದಿವೆ ಎಂದು ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್ ತಿಳಿಸಿದ್ದಾರೆ.

ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಗುರುವಾರ ಬೀದರ್ ನಗರಕ್ಕೆ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಅಂಡರ್ ವರ್ಲ್ಡ್ ಸೇರಿ ಕೆಲವು ಕಡೆಗಳಿಂದ ನನಗೂ ಜೀವ ಬೆದರಿಕೆ ಕರೆಗಳು ಬಂದಿವೆ ಎಂದರು.

ಪಿಎಫ್ಐ ನಿಂದ ಖಾದರ್ ರವರಿಗೆ ಜೀವ ಬೆದರಿಕೆ ಕರೆ ಬಂದಿದೆ ಎಂಬ ಅನುಪಮಾ ಶೆಣೈ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ನನಗೆ ಜೀವ ಬೆದರಿಕೆ ಬಂದಿದೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಹಿಂದೆಯೂ ಕೆಲವು ಬಾರಿ ನನಗೆ ಜೀವ ಬೆದರಿಕೆ ಕರೆಗಳು ಬಂದಿವೆ. ನನಗಾಗಿ ಮಂಗಳೂರಿನಲ್ಲಿ ಎನ್ಐಎ ಸ್ಥಾಪಿಸುವುದು ಬೇಡ. ಜಿಲ್ಲೆಯ ಜನಕ್ಕಾಗಿ ಮಾಡುವುದಾದರೆ ಮಾಡಲಿ. ಎಲ್ಲಿ ಹುಟ್ಟಬೇಕು, ಎಲ್ಲಿ ಸಾಯಬೇಕು ಎಂಬುದನ್ನು ಆ ದೇವರು ಬರೆದಿದ್ದಾನೆ. ನೆಮ್ಮದಿಯಾಗಿ ಸಾಯುವ ಪರಿಸ್ಥಿತಿ ಮಾಡಿಕೊಡಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ದೇವರು ಇಟ್ಟಂತೆ ಇರಲಿ, ನಮ್ಮ ಕೈಯಲ್ಲಿ ಏನೂ ಇಲ್ಲ ಈಗ ಮಾತನಾಡುತ್ತಿದ್ದೇನೆ. ಮರಳಿ ಮತ್ತೆ ಹೋಗುತ್ತೇನೆ ಎನ್ನುವ ಗ್ಯಾರಂಟಿ ಇಲ್ಲ ಎಂದು ಖಾದರ್ ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular