ನ. 25 ರಂದು ಶುಭಾಂಶು ಶುಕ್ಲಾರವರೊಂದಿಗೆ ಗಗನಯಾತ್ರಿ-ವಿದ್ಯಾರ್ಥಿ ಸಂವಾದ ವಿಶೇಷ ಕಾರ್ಯಕ್ರಮ

ಧಾರವಾಡ : ಭಾರತದ ಗಗನಯಾತ್ರಿಯಾದ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರು Axiom Mission- 4 ಯೋಜನೆಯಡಿ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಪ್ರವೇಶಿಸಿದ ಮೊದಲ ಭಾರತೀಯ ಹಾಗೂ ಎರಡನೇ ಭಾರತೀಯ ಗಗನಯಾತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಅವರು ವಿದ್ಯಾರ್ಥಿಗಳಿಗೆ ಪ್ರೇರಣಾದಾಯಕ ವ್ಯಕ್ತಿತ್ವವಾಗಿರುವುದರಿಂದ, ವಿದ್ಯಾರ್ಥಿಗಳಲ್ಲಿ ವಿಜ್ಞಾನಾಭಿವೃದ್ಧಿ ಮತ್ತು ಬಾಹ್ಯಾಕಾಶ ವಿಜ್ಞಾನ ಕ್ಷೇತ್ರದ ಆಸಕ್ತಿಯನ್ನು ಉತ್ತೇಜಿಸುವ ಮಹತ್ವದ ಅವಕಾಶವಾಗಿದೆ.

ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಂಗ ಸಂಸ್ಥೆಯಾದ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿಯಿಂದ (ಕಸ್ಟೆಪ್ಸ್) ಶುಭಾಂಶು ಶುಕ್ಲಾರವರೊಂದಿಗೆ ಗಗನಯಾತ್ರಿ -ವಿದ್ಯಾರ್ಥಿ ಸಂವಾದ ಎಂಬ ವಿಶೇಷ ಕಾರ್ಯಕ್ರಮವನ್ನು ನವೆಂಬರ್ 25, 2025 ರಂದು ಬೆಳಿಗ್ಗೆ 10 ಗಂಟೆಗೆ ಬೆಂಗಳೂರು ನಗರದ ಜವಾಹರಲಾಲ್ ನೆಹರು ತಾರಾಲಯದಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮದ ನೇರ ಪ್ರಸಾರ ವ್ಯವಸ್ಥೆಯನ್ನು ಮಾಡಲಾಗುತ್ತದೆ.

ಗಗನಯಾತ್ರಿ-ವಿದ್ಯಾರ್ಥಿ ಸಂವಾದ ಕಾರ್ಯಕ್ರಮವು ನೇರ ಪ್ರಸಾರವಾಗುವುದರಿಂದ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಮತ್ತು ಸರ್ಕಾರಿ ಪ್ರೌಢ ಶಾಲೆಗಳಗಳಲ್ಲಿ ವಿದ್ಯಾರ್ಥಿಗಳಿಗೆ ಸದರಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅವಕಾಶವಾಗುವಂತೆ ಕ್ರಮಕೈಗೊಳ್ಳಲು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read