ಬೆಳಗಾವಿ: ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ವಿಭಾಗದಿಂದ ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ.
ಗಣೇಶ ಹಬ್ಬದ ಪ್ರಯುಕ್ತ ಪ್ರಯಾಣಿಕರಿಗೆ ಅನುಕೂಲವಾಗುವಂತೆ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ. ಚಿಕ್ಕೋಡಿ, ನಿಪ್ಪಾಣಿ, ಸಂಕೇಶ್ವರ, ಹುಕ್ಕೇರಿ, ಗೋಕಾಕ, ರಾಯಬಾಗ ಹಾಗೂ ಅಥಣಿ ಘಟಕಗಳಿಂದ ಬೆಂಗಳೂರು, ಪೂಣೆ, ಸಾತಾರಾ, ಇಚಲಕರಂಜಿ, ಕೊಲ್ಲಾಪೂರ, ಮಿರಜ ಹಾಗೂ ಇತರೇ ಅಂತರ ರಾಜ್ಯ ಮಾರ್ಗಗಳಿಗೆ ಆಗಸ್ಟ್ 22 ರಿಂದ 31 ರ ವರೆಗೆ ಹೆಚ್ಚುವರಿ ಬಸ್ ಗಳು ಕಾರ್ಯಾಚರಣೆ ನಡೆಸಲಿವೆ.
ಅಲ್ಲದೇ ಮೂರು ದಿನಗಳ ಕಾಲ ಹೆಚ್ಚುವರಿ ವಾಹನಗಳನ್ನು ಬೆಂಗಳೂರಿನಿಂದ ವಿಭಾಗದ ತಾಲೂಕು ಕೇಂದ್ರಗಳಿಗೆ ಕಾರ್ಯಾಚರಣೆ ಮಾಡಲಾಗುವುದು. ಸಾರ್ವಜನಿಕ ಪ್ರಯಾಣಿಕರು ಈ ವಿಶೇಷ ಹೆಚ್ಚುವರಿ ಸಾರಿಗೆಗಳ ಪ್ರಯೋಜನ ಪಡೆಯಬಹುದಾಗಿದೆ ಎಂದು ಚಿಕ್ಕೋಡಿ ವಿಭಾಗ ವಾ.ಕ.ರ.ಸಾ.ಸಂಸ್ಥೆ ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.