HomeLive NewsBIG NEWS: ಜಾತಿಗಣತಿ ವರದಿ: ಇಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆ ಮೇಲೆ ಎಲ್ಲರ...

BIG NEWS: ಜಾತಿಗಣತಿ ವರದಿ: ಇಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆ ಮೇಲೆ ಎಲ್ಲರ ಚಿತ್ತ!

ಬೆಂಗಳೂರು: ಜಾತಿಗಣತಿ ವರದಿ ವಿಚಾರವಾಗಿ ಇಂದು ಮ್ಮುಖ್ಯಮಂತ್ರಿ ಸಿದರಾಮಯ್ಯ ನೇತೃತ್ವದಲ್ಲಿ ವಿಶೇಷ ಸಚಿವ ಸಂಪುಟ ಸಭೆ ನಡೆಯಲಿದ್ದು, ಸಭೆಯತ್ತ ರಾಜ್ಯದ ಜನತೆಯ ಚಿತ್ತ ನೆಟ್ಟಿದೆ.

ಇಂದು ಜಾತಿಗಣತಿ ಭವಿಷ್ಯ ನಿರ್ಧಾರವಾಗಲಿದೆ. ವಿಧಾನಸೌಧದಲ್ಲಿ ಸಂಜೆ 4 ಗಂಟೆಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಶೇಷ ಸಚಿವ ಸಂಪುಟ ಸಭೆ ನಡೆಯಲಿದ್ದುಮ್, ಸಭೆಯಲ್ಲಿ ಜಾತಿಗಣತಿ ವರದಿ ಬಗ್ಗೆ ಸಚಿವರ ಅಭಿಪ್ರಾಯ ಸಂಗ್ರಹವಾಗಲಿದೆ.

ಈಗಾಗಲೇ ರಾಜ್ಯಾದ್ಯಂತ ಜಾತಿಗಣತಿ ವರದಿಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಲಿಂಗಾಯಿತ, ಒಕ್ಕಲಿಗ ಸೇರಿದಂತೆ ವಿವಿಧ ಸಮುದಾಯದ ಮುಖಂಡರು ಜಾತಿಗಣತಿ ವರದಿ ವಿರೋಧಿಸಿದ್ದಾರೆ. ವರದಿ ಜಾರಿಯಾದರೆ ಸರ್ಕಾರ ಬೀಳಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ. ಕೆಲ ಸಚಿವರು ಕೂಡ ಜಾತಿಗಣತಿ ವರದಿಯನ್ನು ವಿರೋಧಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದಿನ ಸಚಿವ ಸಂಪುಟ ಸಭೆಯಲ್ಲಿ ಸಚಿವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಶೇಷ ಅಧಿವೇಶನ ಕರೆದು ಚರ್ಚಿಸಲು ಸಿಎಂ ಸಿದ್ದರಾಮಯ್ಯ ಅವರಿಗೆ ಸಚಿವರು ಒತ್ತಾಯಿಸುವ ಸಾಧ್ಯತೆ ಇದೆ. ಸದನ ಸಮಿತಿ ರಚಿಸಿ ಜಾತಿಗಣತಿ ಅಧ್ಯಯನಕ್ಕೆ ಮುಕ್ತ ಆಯ್ಕೆ ನೀಡಲು ಒತ್ತಾಯಿಸಬಹುದು, ವರದಿ ನ್ಯಾಯಾಲೌಅದ ಮೆಟ್ಟಿಲೇರಿದರೆ ಸಾಧಕ-ಬಾಅಧಕ ಏನಾಗಬಹುದು ಎಂಬ ಬಗ್ಗೆಯೂ ಚರ್ಚೆ ನಡೆಯುವ ಸಾಧ್ಯತೆ ಇದೆ. ಒಟ್ಟಾರೆ ಇಂದು ನಡೆಯಲಿರುವ ರಾಜ್ಯ ಸಚಿವ ಸಮ್ಪುಟ ಸಭೆ ಮಹತ್ವ ಪಡೆದುಕೊಂಡಿದೆ.

For Latest News Updates, Join Our Whatsapp Community🚩
RELATED ARTICLES

Most Popular