HomeKarnatakaBIG NEWS: ಸರ್ಕಾರಿ ಶಾಲಾ, ಕಾಲೇಜುಗಳಲ್ಲಿ ದಾಖಲಾತಿ ಹೆಚ್ಚಳಕ್ಕೆ ವಿಶೇಷ ಅಭಿಯಾನ

BIG NEWS: ಸರ್ಕಾರಿ ಶಾಲಾ, ಕಾಲೇಜುಗಳಲ್ಲಿ ದಾಖಲಾತಿ ಹೆಚ್ಚಳಕ್ಕೆ ವಿಶೇಷ ಅಭಿಯಾನ

ಬೆಂಗಳೂರು: ಸರ್ಕಾರಿ ಶಾಲಾ, ಕಾಲೇಜುಗಳಲ್ಲಿ 2026 -27ನೇ ಶೈಕ್ಷಣಿಕ ಸಾಲಿನಲ್ಲಿ ದಾಖಲಾತಿ ಹೆಚ್ಚಳಕ್ಕೆ ವಿಶೇಷ ಅಭಿಯಾನ ನಡೆಸುವ ಬಗ್ಗೆ ಶಾಲಾ ಶಿಕ್ಷಣ ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗಿದೆ.

6ರಿಂದ 18 ವರ್ಷ ವಯಸ್ಸಿನ ಶಾಲೆ ಬಿಟ್ಟ ಮಕ್ಕಳನ್ನು ಪತ್ತೆ ಮಾಡಿ ಮರಳಿ ಶಾಲೆಗಳಿಗೆ ಕರೆತರುವ ಜೊತೆಗೆ ಶಾಲೆ ಬಿಟ್ಟ ಮಕ್ಕಳನ್ನು ಗುರುತಿಸಲು ದಾಖಲಾತಿ ಜಾಗೃತಿ ಅಭಿಯಾನ ಕೈಗೊಳ್ಳುವಂತೆ ರಾಜ್ಯದ ಎಲ್ಲಾ ಉಪನಿರ್ದೇಶಕರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಶಾಲಾ ಶಿಕ್ಷಣ ಇಲಾಖೆ ಸೂಚಿಸಿದೆ.

ಬೇರೆ ಬೇರೆ ಕಾರಣಗಳಿಂದ ವಲಸೆ ಹೋದ ಮಕ್ಕಳು, ಶಾಲಾ-ಕಾಲೇಜುಗಳಿಂದ ಹೊರಗೆ ಉಳಿಯುವ ಮಕ್ಕಳನ್ನು ಮುಖ್ಯ ವಾಹಿನಿಗೆ ಕರೆ ತರಲು ಅಗತ್ಯ ಕ್ರಮ ಕೈಗೊಳ್ಳಬೇಕು. ನಗರ ಮತ್ತು ಗ್ರಾಮೀಣ ಪ್ರದೇಶಗಳ ವ್ಯಾಪ್ತಿಯ ಎಲ್ಲಾ ಜನ ವಸತಿ ಪ್ರದೇಶಗಳು, ಶಾಲೆಗಳು, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿಶೇಷ ಅಭಿಯಾನ ಕೈಗೊಂಡು ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಹೆಚ್ಚಿಸಬೇಕೆಂದು ತಿಳಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular