HomeLatest NewsBIG NEWS: ಬೆಂಗಳೂರು ಹೊರತುಪಡಿಸಿ ಎಲ್ಲಾ ಶಾಸಕರಿಗೆ ವಿಶೇಷ ಅನುದಾನ

BIG NEWS: ಬೆಂಗಳೂರು ಹೊರತುಪಡಿಸಿ ಎಲ್ಲಾ ಶಾಸಕರಿಗೆ ವಿಶೇಷ ಅನುದಾನ

ಹುಬ್ಬಳ್ಳಿ: ಮುಖ್ಯಮಂತ್ರಿಗಳ ದೃಢನಿರ್ಧಾರ ಹಾಗೂ ಸಕಾಲಿಕ ಕ್ರಮಗಳಿಂದಾಗಿ ರಾಜ್ಯದ ಆರ್ಥಿಕ ಪರಿಸ್ಥಿತಿ ಸದೃಢವಾಗಿದೆ. ಅಭಿವೃದ್ಧಿ ಕಾಮಗಾರಿಗಳಿಗೆ ನಿರಂತರ ಅನುದಾನ ನೀಡಲು ಮುಖ್ಯಮಂತ್ರಿಗಳು ಸಮ್ಮತಿಸಿ, ಕ್ರಮಕೈಗೊಂಡಿದ್ದಾರೆ ಎಂದು ಶಾಸಕರು ಹಾಗೂ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ.

ಇಂದು ಹುಬ್ಬಳ್ಳಿ ಸಕ್ರ್ಯೂಟ್ ಹೌಸ್ ನಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ರಾಜ್ಯದ ಪ್ರತಿ ಶಾಸಕರಿಗೆ ಬೇಡಿಕೆ ಅನುಸಾರವಾಗಿ ಅನುದಾನ ಬಿಡುಗಡೆ ಮಾಡಲು ಕ್ರಮಕೈಗೊಳ್ಳಲಾಗುತ್ತಿದೆ. ಬರುವ ಜುಲೈ 30, 31 ಮತ್ತು ಆಗಸ್ಟ್ 3 ರಂದು ಶಾಸಕರೊಂದಿಗೆ ಮುಖ್ಯಮಂತ್ರಿಗಳ ನೇರ ಭೇಟಿ ಮಾಡಲು ನಿರ್ಧರಿಸಲಾಗಿದೆ. ರಾಜ್ಯ ಸರ್ಕಾರವು ಪ್ರಸಕ್ತ ಸಾಲಿನಲ್ಲಿ 4.09 ಲಕ್ಷ ರೂ. ಬಜೆಟ್ ಮಂಡಿಸಿದೆ. ಅದರಲ್ಲೂ ಅಭಿವೃದ್ಧಿ ಕೆಲಸಗಳಿಗೆ ವಿನಿಯೋಗಿಸಲು 83 ಸಾವಿರ ಕೋಟಿ ರೂ. ಬಂಡವಾಳ ವೆಚ್ಚವಿದೆ. ರಾಜ್ಯದಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 50 ಕೋಟಿ ರೂ. ವಿಶೇಷ ಅನುದಾನ ಬಿಡುಗಡೆ ಮಾಡಲಾಗುತ್ತದೆ ಎಂದು ತಿಳಿಸಿದರು.

ಮುಖ್ಯಮಂತ್ರಿ ಅವರ ಮೂಲ ಸೌಕರ್ಯ ಅಭಿವೃದ್ಧಿ ಯೋಜನೆ ಅಡಿಯಲ್ಲಿ ವಿಧಾನಸಭಾ ಸದಸ್ಯರಿಗೆ ವಿಶೇಷ ಅನುದಾನ ಬಿಡುಗಡೆಗೊಳ್ಳಲಿದೆ. ರಾಜ್ಯದಲ್ಲಿ ಒಟ್ಟು 224 ವಿಧಾನಸಭಾ ಸದಸ್ಯರಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 28 ಸದಸ್ಯರನ್ನು ಹೊರತುಪಡಿಸಿ ಉಳಿದ 196 ಸದಸ್ಯರಿಗೆ ವಿಶೇಷ ಅನುದಾನ ದೊರೆಯಲಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ 28 ಸದಸ್ಯರಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಿಂದಲೇ ಅನುದಾನ ದೊರೆಯಲಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪತ್ರಿಕಾಗೋಷ್ಠಿಯಲ್ಲಿ ಮಾಜಿ ಸಂಸದ ಐ.ಜಿ. ಸನದಿ, ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕೀರ್ ಸನದಿ, ಮುಖಂಡರಾದ ಅನಿಲಕುಮಾರ ಪಾಟೀಲ, ಸದಾನಂದ ಡಂಗನವರ, ಚಂದ್ರಶೇಖರ ಜುಟ್ಟಲ ಸೇರಿದಂತೆ ಇತರರು ಇದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular