ಗೃಹ ಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ವಿಶೇಷ ಆಮಂತ್ರಣ

ಕೊಪ್ಪಳ : ರಾಜ್ಯ ಸರ್ಕಾರದ ಗೃಹ ಲಕ್ಷ್ಮಿ ಯೋಜನೆ ಚಾಲನಾ ಕಾರ್ಯಕ್ರಮವು ಆಗಸ್ಟ್ 30ರಂದು ನಿಗದಿಯಾಗಿದೆ. ಈ ಹಿನ್ನೆಲೆಯಲ್ಲಿ, ಯಲಬುರ್ಗಾ ತಾಲೂಕಿನ ಸಿಡಿಪಿಓ ಸಿಂಧು ಯಲಿಗಾರ ಅವರು ಗೃಹ ಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಅರಿಶಿನ ಕುಂಕುಮ ನೀಡುವ ಮೂಲಕ ವಿಶೇಷ ಆಮಂತ್ರಣ ನೀಡಿದರು.

ತಳಕಲ್ ಗ್ರಾಮದಲ್ಲಿ ಫಲಾನುಭವಿಗಳನ್ನು ಭೇಟಿ ಮಾಡಿದ ಅವರು, ಗೃಹಲಕ್ಷ್ಮಿ ಯೋಜನೆಯು ಪ್ರತಿ ಗ್ರಾಮಗಳಲ್ಲೂ ಸಮರ್ಪಕ ಅನುಷ್ಠಾನವಾಗಬೇಕು. ಅರ್ಹರು ಹೆಸರು ನೋಂದಾಯಿಸಬೇಕು ಎಂದು ಅವರು ಇದೆ ವೇಳೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ತಳಕಲ್ ಗ್ರಾಪಂ ಅಧ್ಯಕ್ಷೆ ಜಹೀರಾ ಬೇಗಂ, ಯಲಬುರ್ಗಾ ತಾಲೂಕಿನ ಶಿಶು ಅಭಿವೃದ್ಧಿ ಇಲಾಖೆಯ ಕಚೇರಿಯ ನೌಕರರು ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಇನ್ನೀತರ ಸಿಬ್ಬಂದಿ ಇದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read