HomeKarnatakaಕೋರ್ಟ್ ಗೆ ಅಲೆದು ಸಾಕಾದವರಿಗೆ ಗುಡ್ ನ್ಯೂಸ್: ಜು.29 ರಿಂದ ‘ವಿಶೇಷ ಲೋಕ್ ಅದಾಲತ್’

ಕೋರ್ಟ್ ಗೆ ಅಲೆದು ಸಾಕಾದವರಿಗೆ ಗುಡ್ ನ್ಯೂಸ್: ಜು.29 ರಿಂದ ‘ವಿಶೇಷ ಲೋಕ್ ಅದಾಲತ್’

ಸರ್ವೋಚ್ಚ ನ್ಯಾಯಾಲಯವು ವಿಶೇಷ ಲೋಕ್ ಅದಾಲತ್ ಅನ್ನು ಜುಲೈ 29 ರಿಂದ ಆಗಸ್ಟ್ 3 ರ ವರೆಗೆ ನಡೆಸಲು ಉದ್ದೇಶಿಸಲಾಗಿದ್ದು, ಪಕ್ಷಕಾರರುಗಳಿಗೆ, ಎದುರುದಾರರ ಜೊತೆ ಪೂರ್ವಭಾವಿ ಲೋಕ್ ಅದಾಲತ್ ಅನ್ನು ನಡೆಸಲು ವಿಡಿಯೋ ಕಾನ್ಸರೆನ್ಸ್ ವ್ಯವಸ್ಥೆ ಮಾಡಲಾಗಿದೆ.

ಎಲ್ಲಾ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಗಳಲ್ಲಿ ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿಗಳಲ್ಲಿ ವಿಡಿಯೋ ಕಾನ್ಫರೆನ್ಸ್ ಕೇಂದ್ರಗಳನ್ನು ಸ್ಥಾಪಿಸಲು ತೀರ್ಮಾನಿಸಲಾಗಿದೆ. ಎಲ್ಲಾ ಪಕ್ಷಕಾರರು ವಿಡಿಯೋ ಕಾನ್ಸರೆನ್ಸ್ ಮೂಲಕ ಸರ್ವೋಚ್ಚ ನ್ಯಾಯಾಲಯವು ನಡೆಸುವ ಪೂರ್ವಭಾವಿ ಲೋಕ್ ಅದಾಲತ್‍ನಲ್ಲಿ ಭಾಗವಹಿಸಲು ಅನುಕೂಲ ಮಾಡಲಾಗಿದೆ.

ಈ ವಿಶೇಷ ಲೋಕ್ ಅದಾಲತ್‍ನಲ್ಲಿ ರಾಜೀ ಸಂಧಾನಕ್ಕೆ ಗುರುತಿಸಲಾದ ಪ್ರಕರಣಗಳ ಪಟ್ಟಿಯನ್ನು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವೆಬ್‍ಸೈಟ್‍ನಲ್ಲಿ ವರದಿಯಾಗಿರುತ್ತದೆ. ಇದರಿಂದ ಪ್ರಕರಣಗಳಲ್ಲಿನ ಎಲ್ಲಾ ಪಕ್ಷಕಾರರುಗಳು ತಮ್ಮ ವಾಸಸ್ಥಳಗಳ ವ್ಯಾಪ್ತಿಯಲ್ಲಿ ಬರುವ ತಾಲ್ಲೂಕು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಗಳಲ್ಲಿ ತೆರೆಯಲಾಗಿರುವ ವಿಡಿಯೋ ಕಾನ್ಫರೆನ್ಸ್ ಕೇಂದ್ರಗಳಿಗೆ ಭೇಟಿ ನೀಡಿ ಜು.29 ರಿಂದ ಆ.03 ರ ವರೆಗೆ ನಡೆಯುವ ವಿಶೇಷ ಲೋಕ್ ಅದಾಲತ್‍ನಲ್ಲಿ ತಮ್ಮ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳುವಂತೆ ಕೋರಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೆಚ್ಚಿನ ಮಾಹಿತಿಗಾಗಿ www.kslsa.kar.nic.in ವೆಬ್ಸ್‍ಸೈಟ್‍ಗೆ ಭೇಟಿ ನೀಡಬಹುಹು ಅಥವಾ ಆಯಾ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಮತ್ತು ತಾಲ್ಲೂಕು ಕಾನೂನು ಸೇವಾ ಸಮಿತಿಗಳ ಸದಸ್ಯ ಕಾರ್ಯದರ್ಶಿಯವರನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ಎಲ್.ರಘುನಾಥ್ ಅವರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular