HomeKarnatakaರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಮತದಾನ ಮಾಡಲು 2 ಗಂಟೆ ವಿಶೇಷ ಅನುಮತಿ

ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಮತದಾನ ಮಾಡಲು 2 ಗಂಟೆ ವಿಶೇಷ ಅನುಮತಿ

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ 2024-2029ನೇ ಅವಧಿಗೆ ದಿನಾಂಕ: 08.10.2024 ರಿಂದ 04.12.2024 ರವರೆಗೆ ನಡೆಯಲಿರುವ ಚುನಾವಣೆಯಲ್ಲಿ ಭಾಗವಹಿಸಿ ಮತ ಚಲಾಯಿಸುವ ನೌಕರರಿಗೆ ವಿಶೇಷ ಅನುಮತಿ ನೀಡಲಾಗಿದೆ.

ರಾಜ್ಯ ಸರ್ಕಾರಿ ನೌಕರರು ಮತದಾನ ಮಾಡಲು ಭೋಜನ ವಿರಾಮದ ಅವಧಿ ಸೇರಿ 2 ಗಂಟೆ ಕಾಲ ವಿಶೇಷ ಅನುಮತಿ ನೀಡಲಾಗಿದೆ.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ 2024-2029ನೇ ಅವಧಿಯ ತಾಲ್ಲೂಕು ಹಾಗೂ ಯೋಜನಾ ಶಾಖೆಗಳ ಕಾರ್ಯಕಾರಿ ಸಮಿತಿಯ ನಿರ್ದೇಶಕರ ಸ್ಥಾನದ ಚುನಾವಣೆಗಳು, ಜಿಲ್ಲೆಗಳ ಕಾರ್ಯಕಾರಿ ಸಮಿತಿ ನಿರ್ದೇಶಕ ಸ್ಥಾನದ ಚುನಾವಣೆಗಳು ಮತ್ತು ಬೆಂಗಳೂರು ನಗರ ಜಿಲ್ಲೆಯ ವಿವಿಧ ಇಲಾಖೆಗಳ ರಾಜ್ಯ ಪರಿಷತ್‌ ಸದಸ್ಯ ಸ್ಥಾನದ ಚುನಾವಣೆಗಳು ದಿನಾಂಕ: 08.10.2024 ರಿಂದ 04.12.2024 ರವರೆಗೆ, ಸಮಯ ಬೆಳಿಗ್ಗೆ 9 ರಿಂದ ಸಂಜೆ 4ರವರೆಗೆ ನಡೆಯಲಿದ್ದು, ಸದರಿ ಚುನಾವಣೆಯಲ್ಲಿ ಮತ ಚಲಾಯಿಸ ಬಯಸುವ ಸರ್ಕಾರಿ ನೌಕರರು ಕಚೇರಿ ವೇಳೆಯಲ್ಲಿ ಮತದಾನ ಕೇಂದ್ರಗಳಿಗೆ ತೆರಳಿ ಮತ ಚಲಾಯಿಸಲು ‘ಎರಡು ಗಂಟೆಗಳ ವಿಶೇಷ ಅನುಮತಿ’ ನೀಡಲಾಗಿದೆ (ಭೋಜನ ವಿರಾಮದ ಮಧ್ಯಾಹ್ನ 1.30 ರಿಂದ 2.10ರ ವೇಳೆಯನ್ನು ಒಳಗೊಂಡಂತೆ).

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸದರಿ ಸಂಘದ ಸದಸ್ಯರಾಗಿ, ಮತದಾರರ ಪಟ್ಟಿಯಲ್ಲಿ ಹೆಸರಿರುವ ನೌಕರರಿಗೆ ಮಾತ್ರ ವಿಶೇಷ ಅನುಮತಿಯನ್ನು ನೀಡಲಾಗಿದೆ. ಈ ಅಧಿಕೃತ ಜ್ಞಾಪನದನ್ವಯ ನೀಡಲಾಗಿರುವ ವಿಶೇಷ ಅನುಮತಿಯನ್ನು ಉಪಯೋಗಿಸಿಕೊಂಡು ಮತ ಚಲಾಯಿಸಲು ತೆರಳುತ್ತಿರುವ ಬಗ್ಗೆ ನೌಕರರು ತಮ್ಮ ಮೇಲಾಧಿಕಾರಿಗಳ ಗಮನಕ್ಕೆ ತಂದು ಮತ ಚಲಾಯಿಸಬಹುದಾಗಿದ್ದು, ಮತದಾನದ ನಂತರ ಪುನಃ ಕಚೇರಿ ಕೆಲಸಕ್ಕೆ ಹಾಜರಾಗಿ ಕರ್ತವ್ಯ ನಿರ್ವಹಿಸಲು ಸೂಚಿಸಿದೆ. ಸಂಬಂಧಿತ ಮೇಲಾಧಿಕಾರಿಗಳು ಈ ವಿಶೇಷ ಅನುಮತಿಯಿಂದ ಕಚೇರಿ ಕೆಲಸಗಳಿಗೆ ತೊಡಕಾಗದಂತೆ ಹಾಗೂ ವಿಧಾನ ಮಂಡಲದ ಕಾರ್ಯಕಲಾಪಗಳಿಗೆ ಅಡಚಣೆಯಾಗದಂತೆಯೂ ಎಚ್ಚರವಹಿಸುವಂತೆ ಈ ಮೂಲಕ ಸೂಚಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular