BREAKING: ಹೊರನಾಡು ಅನ್ನಪೂರ್ಣೇಶ್ವರಿ, ಶೃಂಗೇರಿ ಶಾರದಾಂಬ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಹೆಸರಲ್ಲಿ ವಂಚನೆ: ಇಬ್ಬರು ಆರೋಪಿಗಳು ಅರೆಸ್ಟ್

ಚಿಕ್ಕಮಗಳೂರು: ಹೊರನಾಡು ಅನ್ನಪೂರ್ಣೇಶ್ವರಿ, ಶೃಂಗೇರಿ ಮಠ ಸೇರಿದಂತೆ ರಾಜ್ಯದ ಪ್ರತಿಷ್ಠಿತ ದೇವಾಲಯಗಳಲ್ಲಿ ವಿಶೇಷ ಪೂಜೆ, ಪ್ರಸಾದ ಹೆಸರಲ್ಲಿ ಭಕ್ತರಿಂದ ಕೋಟ್ಯಂತರ ರೂಪಾಯಿ ವಂಚಿಸಿದ್ದ ಖತರ್ನಾಕ್ ವಂಚಕರನ್ನು ಚಿಕ್ಕಮಗಳೂರು ಪೊಲೀಸರು ಬಂಧಿಸಿದ್ದಾರೆ.

ರಾಜ್ಯದ ಪ್ರಮುಖ ದೇವಸ್ಥಾನಗಳಲ್ಲಿ ಪೂಜೆ, ವಿಶೇಷ ಪೂಜೆ, ಪ್ರಸಾದದ ಹೆಸರಲ್ಲಿ ಆನ್ ಲೈನ್ ಮೂಲಕ ವಂಚಿಸುತ್ತಿದ್ದ ತೆಲಂಗಾಣ ಮೂಲದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರನ್ನು ಸುದೀಪ್ ಹಾಗೂ ಅನಿಲ್ ಬಂಧಿತ ಆರೋಪಿಗಳು.

ಚಿಕ್ಕಮಗಳೂರು ಸಿಇಎನ್ ಪೊಲೀಸ್ ಹಾಗೂ ಡಿವೈಎಸ್ ಪಿ ನೇತೃತ್ವದಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳ ಬಂಧನಕ್ಕಾಗಿ ಚಿಕ್ಕಮಗಳೂರು ಎಸ್ ಪಿ ವಿಕ್ರಂ ಆಮ್ಟೆ ವಿಶೇಷ ತಂಡ ರಚಿಸಿದ್ದರು. ಸದ್ಯ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read