ಜ.22 ರಂದು ರಾಜ್ಯದ ಎಲ್ಲಾ ಮುಜರಾಯಿ ದೇವಾಲಯಗಳಲ್ಲಿ ವಿಶೇಷ ಪೂಜೆ : ಸಚಿವ ರಾಮಲಿಂಗಾ ರೆಡ್ಡಿ ಸೂಚನೆ

ಬೆಂಗಳೂರು : ಜನವರಿ 22 ರಂದು ರಾಮಮಂದಿರ ಉದ್ಘಾಟನೆ ಹಿನ್ನೆಲೆ ರಾಜ್ಯದ ಎಲ್ಲಾ ಮುಜರಾಯಿ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಲು ಸಚಿವ ರಾಮಲಿಂಗಾರೆಡ್ಡಿ ಸೂಚನೆ ನೀಡಿದ್ದಾರೆ.

ಈ ಕುರಿತು ಮಾತನಾಡಿದ ಸಚಿವ ರಾಮಲಿಂಗಾರೆಡ್ಡಿ, ಅಯೋಧ್ಯೆ ರಾಮಮಂದಿರದಲ್ಲಿ ರಾಮನ ಪ್ರತಿಷ್ಠಾಪನೆ ಮಾಡುವ ವೇಳೆ ರಾಜ್ಯದ ಎಲ್ಲಾ ಮುಜರಾಯಿ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಲು ತಿಳಿಸಿದ್ದೇನೆ ಎಂದರು.

ಕೇವಲ ರಾಮನ ದೇವಾಲಯ ಮಾತ್ರ ವಲ್ಲ ಎಲ್ಲಾ ದೇವಾಲಯಗಳಲ್ಲೂ ವಿಶೇಷ ಪೂಜೆ ಸಲ್ಲಿಸಬೇಕು . ಪೂಜೆಯ ಕ್ರಮಗಳ ಈ ಬಗ್ಗೆ ಮುಜರಾಯಿ ಇಲಾಖೆ ಆಯು ಕರು ಪ್ರತ್ಯೇಕ ಸುತ್ತೋಲೆ ಹೊರಡಿಸಲಿದ್ದಾರೆ. ಜ.22ರಂದು ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆ ಮಾಡುವ ಹೊತ್ತಿನಲ್ಲಿ ರಾಜ್ಯದ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಬೇಕು ಎಂದರು.

https://twitter.com/RLR_BTM/status/1743833933933060247

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read