HomeIndiaರಾಮ ಮಂದಿರ ಉದ್ಘಾಟನೆ ದಿನ ಮಸೀದಿ, ದರ್ಗಾಗಳಲ್ಲಿ ವಿಶೇಷ ಪ್ರಾರ್ಥನೆ: ಬೆಳಗಲಿವೆ ದೀಪ

ರಾಮ ಮಂದಿರ ಉದ್ಘಾಟನೆ ದಿನ ಮಸೀದಿ, ದರ್ಗಾಗಳಲ್ಲಿ ವಿಶೇಷ ಪ್ರಾರ್ಥನೆ: ಬೆಳಗಲಿವೆ ದೀಪ

ಬೆಂಗಳೂರು: ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯ ದಿನ ದೇಶದ ಮಸೀದಿ, ದರ್ಗಾಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ ದೀಪ ಬೆಳಗಿಸಲಾಗುವುದು ಎಂದು ಬಿಜೆಪಿ ಅಲ್ಪಸಂಖ್ಯಾತರ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಜಮಾಲ್ ಸಿದ್ದಿಖಿ ಹೇಳಿದ್ದಾರೆ.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಯೋಧ್ಯೆ ರಾಮ ಜನ್ಮಭೂಮಿಯಲ್ಲಿ ಭಗವಾನ್ ರಾಮನ ವಿಗ್ರಹ ಪ್ರತಿಷ್ಠಾಪನೆ ಪ್ರತಿ ಭಾರತೀಯರಿಗೆ ಸಂತಸದ ಮಹೋತ್ಸವವಾಗಿದೆ. ಈ ಹಿನ್ನೆಲೆಯಲ್ಲಿ ಮಸೀದಿ, ದರ್ಗಾಗಳಲ್ಲಿ ಸ್ವಚ್ಛತಾ ಕಾರ್ಯಕ್ರಮ, ಸೂಫಿ ಸಂತರೊಂದಿಗೆ ಸಂವಾದ, ವಿಶೇಷ ಪ್ರಾರ್ಥನೆ ಸಲ್ಲಿಸಲಾಗುವುದು. ಸಂಜೆ 5 ದೀಪಗಳನ್ನು ಬೆಳಗಿಸಲಾಗುವುದು. ಈ ನಿಟ್ಟಿನಲ್ಲಿ ಅಲ್ಪಸಂಖ್ಯಾತ ಮೋರ್ಚಾ ಕಾರ್ಯಕರ್ತರು ಜಾಗೃತಿ ಮೂಡಿಸಲಿದ್ದಾರೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular