HomeLatest Newsಪ್ರಧಾನ ಮಂತ್ರಿ ಶ್ರಮಯೋಗಿ ಮಾನ್-ಧನ್ ಯೋಜನೆಯಡಿ 'ವಿಶೇಷ ನೋಂದಣಿ ಅಭಿಯಾನ' ಆರಂಭ

ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್-ಧನ್ ಯೋಜನೆಯಡಿ ‘ವಿಶೇಷ ನೋಂದಣಿ ಅಭಿಯಾನ’ ಆರಂಭ

ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್-ಧನ್ ಯೋಜನೆ ಹಾಗೂ National Pension Scheme for the Traders and self Employed Persons -NPS-Traders ಯೋಜನೆಗಳಡಿ ಅಸಂಘಟಿತ ವಲಯದ ಕಾರ್ಮಿಕರನ್ನು, ವ್ಯಾಪಾರಿಗಳು ಹಾಗೂ ಸ್ವಯಂ ಉದ್ಯೋಗಿಗಳನ್ನು ನೋಂದಾಯಿಸಲು 15 ಜನವರಿ ರಿಂದ 15 ಮಾರ್ಚ್ 2026 ರವರೆಗೆ “ವಿಶೇಷ ನೋಂದಣಿ ಅಭಿಯಾನ” ವನ್ನು ಹಮ್ಮಿಕೊಳ್ಳಲಾಗಿದೆ.

18 ರಿಂದ 40 ವರ್ಷದೊಳಗಿನ ಅಸಂಘಟಿತ ಕಾರ್ಮಿಕರು ಈ ಯೋಜನೆಯಡಿ ನೋಂದಾಯಿಸಬಹುದಾಗಿದ್ದು, ವಯಸ್ಸಿಗೆ ಅನುಗುಣವಾಗಿ ಮಾಸಿಕವಾಗಿ ರೂ. 55/- ರಿಂದ ರೂ. 200/- ರವರೆಗೆ ವಂತಿಕೆ ಪಾವತಿ ಮಾಡಬೇಕಾಗುತ್ತದೆ. ಕೇಂದ್ರ ಸರ್ಕಾರದ ವತಿಯಿಂದ ಅಷ್ಟೇ ವಂತಿಕೆ ಪಾವತಿಸಿ ಬ್ಯಾಂಕ್ ಖಾತೆಯಲ್ಲಿ ಈ ಮೊತ್ತವನ್ನು ಸಂಗ್ರಹಿಸಲಾಗುತ್ತದೆ. 60 ವರ್ಷ ಪೂರ್ಣಗೊಂಡ ನಂತರ ಮಾಸಿಕ ರೂ.3000/- ಪಿಂಚಣಿ ಸೌಲಭ್ಯ ಪಡೆಯಬಹುದಾಗಿದೆ.

ಈ ಯೋಜನೆಯಡಿ ನರೇಗಾ ಕಾರ್ಮಿಕರು, ಎಸ್.ಹೆಚ್.ಜಿ. ಸದಸ್ಯರು, ಕೃಷಿ ಕಾರ್ಮಿಕರು. ಅಂಗನವಾಡಿ ಕಾರ್ಮಿಕರು, ಮಧ್ಯಾಹ್ನದ ಬಿಸಿ ಊಟದ ಕಾರ್ಮಿಕರು, ಆಶಾ ಕಾರ್ಯಕರ್ತೆಯರು, ಬೀದಿ ಬದಿ ವ್ಯಾಪಾರಿಗಳು, ಗೃಹ ಕಾರ್ಮಿಕರು, ಮೀನುಗಾರರು ಹಾಗೂ ಇನ್ನಿತರೆ ಅಸಂಘಟಿತ ವಲಯಗಳ ಕಾರ್ಮಿಕರು ಹಾಗೂ ವ್ಯಾಪಾರಿಗಳ ಆಧಾರ್ ಕಾರ್ಡ್, ಬ್ಯಾಂಕ್ ಪಾಸ್‌ಬುಕ್ ಹಾಗೂ ಮೊದಲ ತಿಂಗಳ ವಂತಿಕೆಯೊAದಿಗೆ ಸಮೀಪದ ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ನೋಂದಣಿಯಾಗಿ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಕಾರ್ಮಿಕ ಅಧಿಕಾರಿಗಳು ಶಿವಮೊಗ್ಗ ಉಪವಿಭಾಗ, ಶಿವಮೊಗ್ಗ ಇವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಅಧಿಕಾರಿಯವರ ಕಛೇರಿ, ಶಿವಮೊಗ್ಗ ಹಾಗೂ ತಾಲೂಕು ಕಾರ್ಮಿಕ ನಿರೀಕ್ಷಕರುಗಳ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular