HomeKarnatakaರಾಜ್ಯದಲ್ಲಿ ಡ್ರಗ್ಸ್ ಜಾಲಕ್ಕೆ ಕಡಿವಾಣ ಹಾಕಲು ವಿಶೇಷ ಕಾರ್ಯಪಡೆ ರಚನೆ

ರಾಜ್ಯದಲ್ಲಿ ಡ್ರಗ್ಸ್ ಜಾಲಕ್ಕೆ ಕಡಿವಾಣ ಹಾಕಲು ವಿಶೇಷ ಕಾರ್ಯಪಡೆ ರಚನೆ

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಡ್ರಗ್ಸ್ ಜಾಲಕ್ಕೆ ಕಡಿವಾಣ ಹಾಕಲು ಆ್ಯಂಟಿ ನಾರ್ಕೋಟಿಕ್ಸ್ ಟಾಸ್ಕ್ ಫೋರ್ಸ್ ಎನ್ನುವ ವಿಶೇಷ ಕಾರ್ಯಪಡೆ ರಚನೆ ಮಾಡಲಾಗಿದೆ ಎಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ.ಎಂ.ಎ. ಸಲೀಂ ತಿಳಿಸಿದ್ದಾರೆ.

ಬುಧವಾರ ಪ್ರೆಸ್ ಕ್ಲಬ್ ನಲ್ಲಿ ಆಯೋಜಿಸಿದ್ದ ಮಾಧ್ಯಮ ಸಂವಾದದಲ್ಲಿ ಅವರು ಮಾತನಾಡಿ, ಡ್ರಗ್ಸ್ ಜಾಲಕ್ಕೆ ಕಡಿವಾಣ ಹಾಕಲು ವಿಶೇಷ ಕಾರ್ಯಪಡೆ ರಚಿಸಿದ್ದು, ಈ ತಂಡಕ್ಕೆ 66 ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಈ ಹಿಂದೆ ಡ್ರಗ್ಸ್ ವ್ಯಸನಿಗಳ ಮೇಲೆ ಮಾತ್ರ ಪ್ರಕರಣ ದಾಖಲಾಗುತ್ತಿತ್ತು. ಈ ಕಾರ್ಯಪಡೆ ಎಲ್ಲಿಂದ ಡ್ರಗ್ಸ್ ಸರಬರಾಜು ಮಾಡಲಾಗುತ್ತಿದೆ ಎನ್ನುವುದನ್ನು ಪತ್ತೆ ಹಚ್ಚಿ ಡ್ರಗ್ಸ್ ಸರಬರಾಜು ಮಾಡುವವರು ಸೇರಿದಂತೆ ಈ ಜಾಲದಲ್ಲಿ ತೊಡಗಿರುವ ಎಲ್ಲರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular