BIG NEWS: ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಕರ ವಸೂಲಿಗೆ ವಿಶೇಷ ‘ತೆರಿಗೆ ವಸೂಲಾತಿ ಅಭಿಯಾನ’

ಎಲ್ಲಾ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಇದೇ ಆಗಸ್ಟ್ 22 ರಿಂದ “ತೆರಿಗೆ ವಸೂಲಾತಿ ಅಭಿಯಾನ” ಈಗಾಗಲೇ ಪ್ರಾರಂಭಗೊಂಡಿದ್ದು, ಸೆಪ್ಟೆಂಬರ್ 5 ರವರೆಗೆ ಕರ ವಸೂಲಾತಿಗಾಗಿ ವಿಶೇಷ ಆಂದೋಲನ ಹಮ್ಮಿಕೊಳ್ಳಲಾಗಿದೆ.

ಗ್ರಾಮ ಪಂಚಾಯಿತಿಗಳು ವಿಕೇಂದ್ರಿಕರಣ ವ್ಯವಸ್ಥೆಯಲ್ಲಿ ಸಶಕ್ತ ಕೇಂದ್ರಗಳಾಗಿ ಕಾರ್ಯನಿರ್ವಹಿಸಲು ಆರ್ಥಿಕವಾಗಿ ಸಬಲೀಕರಣ ಹೊಂದುವ ಅವಶ್ಯಕತೆ ಇರುತ್ತದೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993ರ ಪ್ರಕರಣ 200 (7) ರಲ್ಲಿ ನಿರ್ಧಿಷ್ಟ ಪಡಿಸಿರುವಂತೆ ಗ್ರಾಮ ಪಂಚಾಯಿತಿಗೆ ಸಲ್ಲಿಕೆ ಆಗಬೇಕಾಗಿರುವ ತೆರಿಗೆಯಲ್ಲಿ ಶೇ.100ರಷ್ಟು ವಸೂಲಿ ಮಾಡುವುದು ಗ್ರಾಮ ಪಂಚಾತಿಯ ಪ್ರಾಥಮಿಕ ಹೊಣೆಗಾರಿಕೆಯಾಗಿರುತ್ತದೆ. ಈ ದಿಸೆಯಲ್ಲಿ ಗ್ರಾಮ ಪಂಚಾಯಿತಿಗಳಲ್ಲಿ ಲಭ್ಯವಿರುವ ಸಂಪನ್ಮೂಲಗಳನ್ನು ಪರಿಣಾಮಕಾರಿಯಾಗಿ ಕ್ರೂಢೀಕರಿಸಿಕೊಳ್ಳಲು ಕರವಸೂಲಾತಿ ಅಭಿಯಾನದ ಪ್ರಕ್ರಿಯೆಯನ್ನು ಒಂದು ವಿಶೇಷ ಅಂದೋಲನವನ್ನಾಗಿ ನಡೆಸಬೇಕಾಗಿರುತ್ತದೆ. ಆದ್ದರಿಂದ ಎಲ್ಲಾ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳನ್ನು ಒಳಗೊಂಡಂತೆ ಗ್ರಾಮ ಪಂಚಾಯಿತಿಗಳಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ನೇತೃತ್ವದಲ್ಲಿ ತಂಡವನ್ನು ರಚಿಸಿ, ಆ.22 ರಿಂದ ಸೆ.5 ರವರೆಗೆ ಕಡ್ಡಾಯವಾಗಿ ತೆರಿಗೆ ವಸೂಲಾತಿ ಅಭಿಯಾನ ಹಮ್ಮಿಕೊಳ್ಳಬೇಕು

ಚಿತ್ರದುರ್ಗ ಜಿಲ್ಲೆಯ ಆಯಾ ತಾಲ್ಲೂಕಿನ ತಾ.ಪಂ. ಕಾರ್ಯ ನಿರ್ವಾಹಕ ಅಧಿಕಾರಿಗಳು, ಎಲ್ಲಾ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಕುಂಠಿತವಾಗಿರುವ ಕಂದಾಯ ವಸೂಲಾತಿ ಪ್ರಗತಿಯನ್ನು ಹೆಚ್ಚಿಸುವ ಹಿನ್ನಲೆಯಲ್ಲಿ, ಕೂಡಲೇ ತೆರಿಗೆ ವಸೂಲಾತಿ ಅಭಿಯಾನ ಹಮ್ಮಿಕೊಂಡು ಪ್ರಗತಿ ಸಾಧಿಸುವಂತೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿ, ಕಂದಾಯ ವಸೂಲಾತಿಯಲ್ಲಿ ಪ್ರಗತಿ ಸಾಧಿಸಬೇಕು. ತಪ್ಪಿದ್ದಲ್ಲಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳನ್ನೇ ನೇರ ಹೊಣೆಗಾರರನ್ನಾಗಿಸಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ. ಸೋಮಶೇಖರ್ ತಿಳಿಸಿದ್ದಾರೆ.

ಜಿ.ಪಂ. ಸಿಇಒ ಅವರ ನಿರ್ದೇಶನದಂತೆ ಗ್ರಾಮ ಪಂಚಾಯತಿಗಳನ್ನು ಸಶಕ್ತಗೊಳಿಸುವ ಉದ್ದೇಶದಿಂದ ಜಿಲ್ಲೆಯ ಎಲ್ಲ ತಾಲ್ಲೂಕುಗಳ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಈಗಾಗಲೆ ಕರ ವಸೂಲಾತಿ ಆಂದೋಲನ ಪ್ರಾರಂಭವಾಗಿದ್ದು, ತಾ.ಪಂ. ಕಾರ್ಯ ನಿರ್ವಾಹಕ ಅಧಿಕಾರಿಗಳು, ಪಿಡಿಒ ಗಳು, ಕಾರ್ಯದರ್ಶಿಗಳು, ನೀರಗಂಟಿಗಳು ತಮ್ಮ ತಮ್ಮ ಗ್ರಾಮಗಳ ವ್ಯಾಪ್ತಿಯಲ್ಲಿ ಕರ ವಸೂಲಾತಿಯನ್ನು ಆರಂಭಿಸಿದ್ದು, ಮನೆಗಳು, ಅಂಗಡಿ ಮುಂಗಟ್ಟು, ಮಳಿಗೆಗಳಿಗೆ ತೆರಳಿ ಕರ ವಸೂಲಾತಿ ಕೈಗೊಳ್ಳುತ್ತಿದ್ದಾರೆ.  ಅಧಿಕಾರಿಗಳು ನಿಗದಿತ ಗುರಿಯನ್ನು ಸಾಧಿಸಿ, ಅಭಿವೃದ್ಧಿಯ ಉದ್ದೇಶದಿಂದ ಗ್ರಾಮ ಪಂಚಾಯತಿಗಳನ್ನು ಆರ್ಥಿಕವಾಗಿ ಸಬಲಗೊಳಿಸಲು ಮುಂದಾಗಬೇಕು ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read