HomeLive Newsಬಹುನಿರೀಕ್ಷಿತ 'ರಾಮಾಯಣ' ಸಿನಿಮಾದ ವಿಶೇಷ ಟೀಸರ್ ರಿಲೀಸ್ |WATCH TEASER

ಬಹುನಿರೀಕ್ಷಿತ ‘ರಾಮಾಯಣ’ ಸಿನಿಮಾದ ವಿಶೇಷ ಟೀಸರ್ ರಿಲೀಸ್ |WATCH TEASER

ರಣಬೀರ್ ಕಪೂರ್ ಮತ್ತು ರಾಕಿಂಗ್ ಸ್ಟಾರ್ ಯಶ್ ಅಭಿನಯದ, ನಿತೇಶ್ ತಿವಾರಿ ನಿರ್ದೇಶನದ ಬಹುನಿರೀಕ್ಷಿತ ‘ರಾಮಾಯಣ’ ಸಿನಿಮಾದ ವಿಶೇಷ ಟೀಸರ್ ಅನ್ನು ಅಮೆರಿಕದ ಲಾಸ್ ಏಂಜಲೀಸ್‌ನಲ್ಲಿ (LA) ಪ್ರದರ್ಶಿಸಲಾಗಿದೆ.

ಲಾಸ್ ಏಂಜಲೀಸ್‌ನಲ್ಲಿ ನಡೆದ ವಿಶೇಷ ಸ್ಕ್ರೀನಿಂಗ್‌ನಲ್ಲಿ ಆಯ್ದ ಪ್ರೇಕ್ಷಕರಿಗೆ ಮಾತ್ರ ಈ ಟೀಸರ್ ತೋರಿಸಲಾಗಿದೆ. ಕೇವಲ 2 ಸೆಕೆಂಡ್‌ಗಳ ಕಾಲ ಕಾಣಿಸಿಕೊಂಡ ರಣಬೀರ್ ಕಪೂರ್ ಅವರ ‘ರಾಮ’ನ ಪಾತ್ರದ ಲುಕ್ ನೋಡಿ ಪ್ರೇಕ್ಷಕರು ಮಂತ್ರಮುಗ್ಧರಾಗಿದ್ದಾರೆ ಎನ್ನಲಾಗಿದೆ.

ಹನುಮ ಜಯಂತಿ ಗಿಫ್ಟ್ : ಭಾರತದ ಪ್ರೇಕ್ಷಕರಿಗಾಗಿ ಅಧಿಕೃತವಾಗಿ ಈ ಟೀಸರ್ ಅನ್ನು ಏಪ್ರಿಲ್ 2ರಂದು (ಹನುಮ ಜಯಂತಿ) ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತಾರಾಗಣ: ಈ ಚಿತ್ರದಲ್ಲಿ ರಣಬೀರ್ ಕಪೂರ್ ರಾಮನಾಗಿ, ಸಾಯಿ ಪಲ್ಲವಿ ಸೀತೆಯಾಗಿ ಮತ್ತು ಕನ್ನಡದ ಹೆಮ್ಮೆ ಯಶ್ ರಾವಣನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸನ್ನಿ ಡಿಯೋಲ್ ಹನುಮಂತನ ಪಾತ್ರಕ್ಕೆ ಜೀವ ತುಂಬಲಿದ್ದಾರೆ.ಭಾರತೀಯ ಚಿತ್ರರಂಗದ ಅತಿ ದೊಡ್ಡ ಬಜೆಟ್‌ನ ಈ ಸಿನಿಮಾ ಎರಡು ಭಾಗಗಳಲ್ಲಿ ತೆರೆಗೆ ಬರಲಿದ್ದು, ಮೊದಲ ಭಾಗ 2026ರ ದೀಪಾವಳಿ ಹಬ್ಬದಂದು ಬಿಡುಗಡೆಯಾಗುವ ಸಾಧ್ಯತೆ ಇದೆ.ಆಸ್ಕರ್ ವಿಜೇತ ಹ್ಯಾನ್ಸ್ ಜಿಮ್ಮರ್ ಮತ್ತು ಎ.ಆರ್. ರೆಹಮಾನ್ ಅವರ ಸಂಗೀತ ಈ ಚಿತ್ರಕ್ಕಿರುವುದು ವಿಶೇಷ.

ಈಗಾಗಲೇ ಬಿಡುಗಡೆಯಾಗಿರುವ ಸಣ್ಣ ಗ್ಲಿಂಪ್ಸ್‌ಗಳು ಸಾಮಾಜಿಕ ಜಾಲತಾಣದಲ್ಲಿ ಸಂಚಲನ ಮೂಡಿಸಿದ್ದು, ಏಪ್ರಿಲ್ 2ರ ಪೂರ್ಣ ಟೀಸರ್ ಬಿಡುಗಡೆಗಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

View this post on Instagram

A post shared by The World Of Ramayana (@worldoframayana)

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular