GOOD NEWS : ದಸರಾ ಹಬ್ಬದ ಪ್ರಯುಕ್ತ ಪ್ರಯಾಣಿಕರಿಗೆ ವಿಶೇಷ ರೈಲು ಸಂಚಾರ : ಇಲ್ಲಿದೆ ವೇಳಾಪಟ್ಟಿ

ಬೆಂಗಳೂರು : ಪ್ರಮುಖ ಹಬ್ಬಗಳಲ್ಲಿ ಒಂದಾದ ದಸರಾ ಹಬ್ಬದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ನೈಋತ್ಯ ರೈಲ್ವೆಯು ಒಂದು ಟ್ರಿಪ್ ಈ ಕೆಳಗಿನ ವಿಶೇಷ ರೈಲುಗಳನ್ನು ಓಡಿಸಲಿದೆ.

ಪ್ರಮುಖ ಹಬ್ಬಗಳಲ್ಲಿ ಒಂದಾದ ದಸರಾ ಹಬ್ಬದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ನೈಋತ್ಯ ರೈಲ್ವೆಯು ಒಂದು ಟ್ರಿಪ್ ಈ ಕೆಳಗಿನ ವಿಶೇಷ ರೈಲುಗಳನ್ನು ಓಡಿಸಲಿದೆ. ರೈಲುಗಳ ವಿವರಗಳು ಹೀಗಿವೆ:

ರೈಲು ಸಂಖ್ಯೆ 06249/06250 ಯಶವಂತಪುರ-ಮಡಗಾಂವ್-ಯಶವಂತಪುರ ಎಕ್ಸ್ಪ್ರೆಸ್ ವಿಶೇಷ ರೈಲು (1 ಟ್ರಿಪ್):
ರೈಲು ಸಂಖ್ಯೆ 06249 ಯಶವಂತಪುರ-ಮಡಗಾಂವ್ ವಿಶೇಷ ಎಕ್ಸ್ಪ್ರೆಸ್ ರೈಲು ಸೆಪ್ಟೆಂಬರ್ 30, 2025 ರಂದು ಮಧ್ಯಾಹ್ನ 12:00 ಗಂಟೆಗೆ ಯಶವಂತಪುರದಿಂದ ಹೊರಟು, ಮರುದಿನ ಬೆಳಿಗ್ಗೆ 05:30 ಗಂಟೆಗೆ ಮಡಗಾಂವ್ ತಲುಪಲಿದೆ. ಮತ್ತೆ ಮರಳುವಾಗ, ರೈಲು ಸಂಖ್ಯೆ 06250 ೨ ಸಂಖ್ಯೆ 06250 ಮಡಗಾಂವ್-ಯಶವಂತಪುರ ವಿಶೇಷ ಎಕ್ಸ್ಪ್ರೆಸ್ ರೈಲು ಅಕ್ಟೋಬರ್ 1, 2025 ರಂದು ಬೆಳಿಗ್ಗೆ 06:30 ಗಂಟೆಗೆ ಮಡಗಾಂವ್ನಿಂದ ಹೊರಟು, ಅದೇ ದಿನ ರಾತ್ರಿ 11:40 ಗಂಟೆಗೆ ಯಶವಂತಪುರ ತಲುಪಲಿದೆ.

ಈ ರೈಲು 16 ಬೋಗಿಗಳನ್ನು (10 ಸ್ವೀಪರ್ ಕ್ಲಾಸ್, 4 ಜನರಲ್ ಸೆಕೆಂಡ್ ಕ್ಲಾಸ್ ಸಿಟ್ಟಿಂಗ್ ಮತ್ತು 2 ಎಸ್ಎಲ್ಆರ್/ಡಿ ಬೋಗಿಗಳು) ಒಳಗೊಂಡಿರಲಿದೆ. ಈ ರೈಲು ಎರಡೂ ಮಾರ್ಗಗಳಲ್ಲಿ ಚಿಕ್ಕಬಾಣಾವರ, ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕ ಪುತ್ತೂರು, ಬಂಟವಾಳ, ಸುರೆತಲ್, ಮುಲ್ಕಿ, ಉಡುಪಿ, ಕುಂದಾಪುರ, ಬೈಂದೂರು, ಭಟ್ಕಳ, ಮುರುಡೇಶ್ವರ, ಹೊನ್ನಾವರ, ಕುಮಟಾ, ಗೋಕರ್ಣ ರೋಡ್, ಅಂಕೋಲಾ ಮತ್ತು ಕಾರವಾರ ನಿಲ್ದಾಣಗಳಲ್ಲಿ ನಿಲುಗಡೆಗೊಳ್ಳಲಿದೆ.

ರೈಲು ಸಂಖ್ಯೆ 06291/06292 ಎಸ್ಎಂವಿಟಿ ಬೆಂಗಳೂರು-ಬೀದರ್-ಎಸ್ಎಂವಿಟಿ ಬೆಂಗಳೂರು ಎಕ್ಸ್ಪ್ರೆಸ್ ವಿಶೇಷ ជួយ (1 ):ರೈಲು ಸಂಖ್ಯೆ 06291 ಎಸ್ಎಂವಿಟಿ ಬೆಂಗಳೂರು-ಬೀದರ್ ವಿಶೇಷ ಎಕ್ಸ್ಪ್ರೆಸ್ ರೈಲು ಸೆಪ್ಟೆಂಬರ್ 30, 2025 ರಂದು ರಾತ್ರಿ 09:15 ಗಂಟೆಗೆ ಎಸ್ಎಂವಿಟಿ ಬೆಂಗಳೂರಿನಿಂದ ಹೊರಟು, ಮರುದಿನ ಬೆಳಿಗ್ಗೆ 11:30 ಗಂಟೆಗೆ ಬೀದರ್ ತಲುಪಲಿದೆ. ಮತ್ತೆ ಮರಳುವಾಗ, ರೈಲು ಸಂಖ್ಯೆ 06292 ಬೀದರ್-ಎಸ್ಎಂವಿಟಿ ಬೆಂಗಳೂರು ವಿಶೇಷ ಎಕ್ಸ್ಪ್ರೆಸ್ ರೈಲು ಅಕ್ಟೋಬರ್ 1, 2025 ರಂದು ಮಧ್ಯಾಹ್ನ 01:00 ಗಂಟೆಗೆ ಬೀದರ್ನಿಂದ ಹೊರಟು, ಮರುದಿನ ಬೆಳಿಗ್ಗೆ 04:00 ಗಂಟೆಗೆ ಎಸ್ಎಂವಿಟಿ ಬೆಂಗಳೂರು ತಲುಪಲಿದೆ.

ಈ ರೈಲು 22 ಬೋಗಿಗಳನ್ನು (20 ಸ್ಲಿಪರ್ ಕ್ಲಾಸ್ ಮತ್ತು 2 ಎಸ್ಎಲ್ಆರ್/ಡಿ ಬೋಗಿಗಳು) ಒಳಗೊಂಡಿರಲಿದೆ. ಈ ರೈಲು ಎರಡೂ ದಿಕ್ಕುಗಳಲ್ಲಿ ಯಲಹಂಕ, ಹಿಂದೂಪುರ, ಧರ್ಮಾವರಂ, ಅನಂತಪುರ, ಗುಂತಕಲ್, ಆದೋನಿ, ಮಂತ್ರಾಲಯಂ ರೋಡ್, ರಾಯಚೂರು, ಕೃಷ್ಣ, ಯಾದಗಿರಿ, ವಾಡಿ, ಶಹಾಬಾದ್, ಕಲಬುರಗಿ ಮತ್ತು ಹುಮನಾಬಾದ ನಿಲ್ದಾಣಗಳಲ್ಲಿ ನಿಲುಗಡೆಗೊಳ್ಳಲಿದೆ.

ಹೆಚ್ಚಿನ ಮಾಹಿತಿಗಾಗಿ, ಹತ್ತಿರದ ರೈಲು ನಿಲ್ದಾಣದ ವಿಚಾರಣಾ ಕೇಂದ್ರಕ್ಕೆ ಭೇಟಿ ನೀಡಿ, ಅಧಿಕೃತ ವೆಬ್ಸೈಟ್ ಪರಿಶೀಲಿಸಿ ಅಥವಾ ಸಹಾಯವಾಣಿ ಸಂಖ್ಯೆ 139 ಗೆ ಕರೆ ಮಾಡಿ ಎಂದು ಪ್ರಕಟಣೆ ಹೊರಡಿಸಿದೆ.

    Share This Article

    Latest News

    ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

    View Results

    Loading ... Loading ...

    Most Read