ನವದೆಹಲಿ: ಸ್ಪೈಸ್ ಜೆಟ್ ವಿಮಾನ ಹಾಗೂ ಆಕಾಶ್ ಏರ್ ವಿಮಾನಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಭಾರಿ ಅನಾಹುತವೊಂದು ಕ್ಷಣಾರ್ಧದಲ್ಲಿ ತಪ್ಪಿರುವ ಘಟನೆ ನಡೆದಿದೆ.
ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಅವಘಡ ಸಂಭವಿಸಿದೆ. ಲ್ಯಾಂಡಿಂಗ್ ಹಾಗೂ ಟೇಕ್ ಆಫ್ ಆಗುತ್ತಿದ್ದ ವಿಮಾನಗಳ ನಡುವೆ ಡಿಕ್ಕಿಯಾಗಿದ್ದು, ಸ್ಪೈಸ್ ಜೆಟ್ ಹಾಗೂ ಆಕಾಶ್ ಏರ್ ಎರಡೂ ವಿಮಾನಗಳ ರೆಕ್ಕೆಗಳಿಗೆ ತೀವ್ರ ಹಾನಿಯಾಗಿದೆ.
ಎರಡು ವಿಮಾನಗಳಲ್ಲಿದ್ದ ಪ್ರಯಾಣಿಕರು ಹಾಗೂ ಸಿಬ್ಬಂದಿಗಳು ಸುರಕ್ಷಿತವಾಗಿದ್ದಾರೆ. ಆಕಾಶ್ ಏರ್ ಲೈನ್ಸ್ ನಿಂದ ಪ್ರಯಾಣಿಕರಿಗೆ ಬದಲಿ ವ್ಯವಸ್ಥೆ ಮಾಡಲಾಗಿದೆ. ಘಟನೆ ಬಗ್ಗೆ ವಿಮಾನ ಯಾನ ಅಧಿಕಾರಿಗಳು ತನಿಖೆ ನಡೆಸಿತ್ತಿದ್ದಾರೆ.

