ನವದೆಹಲಿ: ಇಂಜಿನ್ ನಲ್ಲಿ ತಾಂತ್ರಿಕ ದೋಷ ಹಿನ್ನೆಲೆಯಲ್ಲಿ ಸ್ಪೈಸ್ ಜೆಟ್ ವಿಮಾನವೊಂದು ತುರ್ತು ಭೂಸ್ಪರ್ಶ ಮಾಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ.
ದೆಹಲಿ ಏರ್ ಪೋರ್ಟ್ ನಿಂದ 150 ಪ್ರಯಾಣಿಕರನ್ನು ಹೊತ್ತು ಲೇಹ್ ಗೆ ಪ್ರಯಾಣಿಸುತ್ತಿದ್ದ ಸ್ಪೈಸ್ ಜೆಟ್ ವಿಮಾನದಲ್ಲಿ ಇಂಜಿನ್ ನಲ್ಲಿ ದೋಷ ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಮತ್ತೆ ದೆಹಲಿಗೆ ವಾಪಸ್ ಆಗಿದ್ದು, ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಆಗಿದೆ.
SG121 ವಿಮಾನದ ಇಂಜಿನ್ ನಲ್ಲಿ ದೋಷ ಕಂಡುಬಮ್ದಿದೆ. ಸದ್ಯ ದೆಹಲಿ ಏರ್ ಪೋರ್ಟ್ ನಲ್ಲಿ ವಿಮಾನ ತುರ್ತಾಗಿ ಲ್ಯಾಂಡಿಂಗ್ ಆಗಿದ್ದು, ಪ್ರಯಾಣಿಕರು, ವಿಕ್ಮಾನ ಸಿಬ್ಬಂದಿಗಳು ಸುರಕ್ಷಿತವಾಗಿದ್ದಾರೆ ಎಂದು ತಿಳಿದುಬಂದಿದೆ.

