ಚಳಿಗಾಲದಲ್ಲಿ ಸೊಪ್ಪು, ತರಕಾರಿಗಳಿಗೇನೂ ಬರವಿಲ್ಲ. ಈ ಋತುವಿನಲ್ಲಿ ಪಾಲಕ್ ಸೊಪ್ಪು ಸಾಮಾನ್ಯವಾಗಿ ಎಲ್ಲಾ ಕಡೆಗಳಲ್ಲಿಯೂ ಲಭ್ಯವಿರುತ್ತದೆ. ಕೆಲವರಿಗೆ ಪಾಲಕ್ ಸೊಪ್ಪು ಇಷ್ಟವಾಗುವುದಿಲ್ಲ.
ಆದ್ರೆ ಅತ್ಯಂತ ಆರೋಗ್ಯಕರ ಸೊಪ್ಪು ಇದು. ಚಳಿಗಾಲದಲ್ಲಿ ಪಾಲಕ್ ಸೊಪ್ಪಿನ ಜ್ಯೂಸ್ ಕುಡಿಯುವುದರಿಂದ ಅನೇಕ ಹಲವಾರು ಗಂಭೀರ ಕಾಯಿಲೆಗಳಿಂದ ಪಾರಾಗಬಹುದು.
ಪಾಲಕ್ ಸೊಪ್ಪಿನಲ್ಲಿ ವಿಟಮಿನ್ ಎ, ವಿಟಮಿನ್ ಸಿ, ವಿಟಮಿನ್ ಕೆ, ಮೆಗ್ನೀಸಿಯಮ್, ಮ್ಯಾಂಗನೀಸ್ ಮತ್ತು ಕಬ್ಬಿಣದಂತಹ ಎಂಟಿಒಕ್ಸಿಡೆಂಟ್‌ಗಳು ಸಾಕಷ್ಟು ಪ್ರಮಾಣದಲ್ಲಿವೆ. ಪಾಲಕ್ ಸೊಪ್ಪನ್ನು ಸೇವನೆ ಮಾಡುವುದರಿಂದ ದೃಷ್ಟಿಶಕ್ತಿ ವೃದ್ಧಿಸುತ್ತದೆ. ಇದರಲ್ಲಿರುವ ವಿಟಮಿನ್ ಸಿ ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.
ಪಾಲಕ್ ಸೊಪ್ಪಿನ ಜ್ಯೂಸ್ ಏಕೆ ಕುಡಿಯಬೇಕು ?
1. ಚಳಿಗಾಲದಲ್ಲಿ ಪಾಲಕ್ ಸೊಪ್ಪನ್ನು ಬಳಸುವುದರಿಂದ ದೇಹದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ. ಕ್ಯಾಲ್ಸಿಯಂ, ಸೋಡಿಯಂ, ಕ್ಲೋರಿನ್, ರಂಜಕ, ಪ್ರೋಟೀನ್ ಮತ್ತು ಕಬ್ಬಿಣವು ಇದರಲ್ಲಿ ಸಾಕಷ್ಟು ಪ್ರಮಾಣದಲ್ಲಿದೆ. ಪಾಲಕ್ ಜ್ಯೂಸ್‌ನಲ್ಲಿ ನಾರಿನಂಶವೂ ಹೆಚ್ಚಾಗಿರುವುದರಿಂದ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳನ್ನು ದೂರ ಮಾಡುತ್ತದೆ. ಮಲಬದ್ಧತೆ, ಅಜೀರ್ಣ ಮತ್ತು ಹೊಟ್ಟೆ ನೋವಿನಿಂದಲೂ ಪರಿಹಾರ ನೀಡುತ್ತದೆ.
2. ಪಾಲಕ್ ಜ್ಯೂಸ್‌ನಲ್ಲಿರುವ ಕಬ್ಬಿಣಾಂಶವು ದೇಹದಲ್ಲಿ ರಕ್ತವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಈ ಮೂಲಕ ರಕ್ತಹೀನತೆಯ ಅಪಾಯವನ್ನು ಕಡಿಮೆ ಮಾಡುತ್ತದೆ. ಅಷ್ಟೇ ಅಲ್ಲ ಪಾಲಕ್ ಜ್ಯೂಸ್ ಕುಡಿಯುವುದರಿಂದ ನೆನಪಿನ ಶಕ್ತಿ ಹೆಚ್ಚಾಗುತ್ತದೆ. ರಕ್ತದೊತ್ತಡದ ಸಮಸ್ಯೆಯನ್ನು ಎದುರಿಸುತ್ತಿರುವವರು ಪಾಲಕ್ ಸೊಪ್ಪಿನ ರಸವನ್ನು ಕುಡಿಯಬೇಕು. ಇದು ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತದೆ. ಇದರಲ್ಲಿರುವ ಕ್ಯಾಲ್ಸಿಯಂ ಮೂಳೆಗಳನ್ನು ಬಲಪಡಿಸುತ್ತದೆ.
3. ಪಾಲಕ್ ಜ್ಯೂಸ್ ಚಯಾಪಚಯವನ್ನು ಹೆಚ್ಚಿಸಲು ಸಹಕಾರಿಯಾಗಿದೆ. ಈ ಕಾರಣದಿಂದಾಗಿ ದೇಹದಲ್ಲಿ ಕೊಬ್ಬು ಸಂಗ್ರಹವಾಗುವುದಿಲ್ಲ ಮತ್ತು ತೂಕವು ವೇಗವಾಗಿ ಕಡಿಮೆಯಾಗಲು ಪ್ರಾರಂಭಿಸುತ್ತದೆ. ನೀವು ಪಾಲಕ್ ಜ್ಯೂಸ್‌ಗೆ ಜೀರಿಗೆ ಪುಡಿ, ಕಾಳುಮೆಣಸಿನ ಪುಡಿ ಮತ್ತು ಸ್ವಲ್ಪ ಉಪ್ಪನ್ನು ಸೇರಿಸಿಕೊಂಡು ಕುಡಿಯಬಹುದು.

 
			 
		 
		 
		 
		 Loading ...
 Loading ... 
		 
		 
		