ಭಾರತದ ಕ್ರಿಕೆಟ್ ತಂಡದ ಆಲ್ ರೌಂಡರ್ ರವೀಂದ್ರ ಜಡೇಜಾ ಗಾಯದ ಸಮಸ್ಯೆಯಿಂದ ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಟೆಸ್ಟ್ ಸರಣಿಯ ಮೂರನೇ ಪಂದ್ಯದ ಮೂರನೇ ದಿನ ಆಟದಿಂದ ಹೊರಗುಳಿದಿದ್ದರು.
ರವೀಂದ್ರ ಜಡೇಜಾ ಹೆಬ್ಬೆರಳಿನ ಶಸ್ತ್ರಚಿಕಿತ್ಸೆ ಮಾಡಿಸಿದ್ದಾರೆ.
ತಮ್ಮ ಫೋಟೋವೊಂದನ್ನು ಸಾಮಾಜಿಕ ಜಾಲತಾಣವಾದ ಇನ್ ಸ್ಟಾಗ್ರಾಂನಲ್ಲಿ ಹಂಚಿಕೊಂಡಿರುವ ರವೀಂದ್ರ ಜಡೇಜಾ ‘ಸ್ವಲ್ಪ ಸಮಯದವರೆಗೆ ವಿಶ್ರಾಂತಿ ಪಡೆದು ಶೀಘ್ರದಲ್ಲೇ ಅಬ್ಬರದಿಂದ ಮರಳುತ್ತೇನೆ’ ಎಂದು ಬರೆದುಕೊಂಡಿದ್ದಾರೆ.
https://www.instagram.com/p/CJ7qSqrFvBk/?utm_source=ig_web_copy_link