alex Certify ಆರ್ಥಿಕ ಸಂಕಷ್ಟದ ಭೀತಿಯಲ್ಲಿ ವಿಶ್ವದ ಶ್ರೀಮಂತ ಕ್ರಿಕೆಟ್ ಸಂಸ್ಥೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆರ್ಥಿಕ ಸಂಕಷ್ಟದ ಭೀತಿಯಲ್ಲಿ ವಿಶ್ವದ ಶ್ರೀಮಂತ ಕ್ರಿಕೆಟ್ ಸಂಸ್ಥೆ

ವಿಶ್ವದ ಶ್ರೀಮಂತ ಕ್ರಿಕೆಟ್ ಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಬಿಸಿಸಿಐ, ಈಗ ಆರ್ಥಿಕ ಸಂಕಷ್ಟದ ಭೀತಿಯನ್ನು ಎದುರಿಸುತ್ತಿದೆ. ನಿಗದಿಯಾಗಿದ್ದ ಐಪಿಎಲ್ ಪಂದ್ಯಾವಳಿಗಳು ನಡೆಯದೆ ಹೋದಲ್ಲಿ ಬಿಸಿಸಿಐಗೆ ಬರೋಬ್ಬರಿ ನಾಲ್ಕು ಸಾವಿರ ಕೋಟಿ ರೂಪಾಯಿ ನಷ್ಟವಾಗಲಿದೆ ಎಂದು ಹೇಳಲಾಗಿದೆ.

ಐಪಿಎಲ್ ಪಂದ್ಯಾವಳಿಗಳು ನಿಗದಿಯಾಗಿದ್ದರೂ ಸಹ ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಲಾಕ್ ಡೌನ್ ಜಾರಿಗೊಳಿಸಿದ್ದರಿಂದ ಮುಂದೂಡಲಾಗಿತ್ತು. ಬಹುತೇಕ ಐಪಿಎಲ್ ತಂಡಗಳಲ್ಲಿ ವಿದೇಶಿ ಆಟಗಾರರಿದ್ದು, ವಿಮಾನ ಸಂಚಾರ ರದ್ದಾಗಿದ್ದ ಕಾರಣ ಅವರುಗಳು ಭಾರತಕ್ಕೆ ಬರಲು ಸಾಧ್ಯವಾಗುತ್ತಿರಲಿಲ್ಲ.

ಅಲ್ಲದೆ ಕ್ರಿಕೆಟ್ ಪಂದ್ಯಾವಳಿಗಳು ನಡೆದರೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರೇಕ್ಷಕರು ಸೇರಲಿದ್ದು, ಇದರಿಂದ ಕೊರೊನಾ ಸೋಂಕು ಮತ್ತಷ್ಟು ಹೆಚ್ಚಾಗಬಹುದೆಂಬ ಭೀತಿಯೂ ಎದುರಾಗಿತ್ತು. ಈ ಎಲ್ಲ ಕಾರಣದಿಂದ ಐಪಿಎಲ್ ಪಂದ್ಯಾವಳಿಗಳು ಅನಿರ್ದಿಷ್ಟಾವಧಿಯವರೆಗೆ ಮುಂದೂಡಲಾಗಿದ್ದು ಇದರಿಂದ ದೊಡ್ಡ ಮಟ್ಟದ ನಷ್ಟ ಬಿಸಿಸಿಐಗೆ ಆಗಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...