
ಕ್ರಿಕೆಟ್ ಅಭಿಮಾನಿಗಳಲ್ಲಿ ಸಾಕಷ್ಟು ಕುತೂಹಲ ಹೆಚ್ಚಿಸಿರುವ ಐಪಿಎಲ್ 14ನೇ ಆವೃತ್ತಿಯಲ್ಲಿ ಎಲ್ಲಾ ಫ್ರಾಂಚೈಸಿಗಳು ಸಾಕಷ್ಟು ಬದಲಾವಣೆಯನ್ನು ಮಾಡುತ್ತಿದ್ದಾರೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಡೇನಿಯರ್ ಸ್ಯಾಮ್ಸ್ ಹಾಗೂ ಹರ್ಷಲ್ ಪಟೇಲ್ ಅವರನ್ನು ತಮ್ಮ ತಂಡಕ್ಕೆ ಕರೆದುಕೊಂಡಿದ್ದಾರೆ. ಈ ಕುರಿತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಮ್ಮ ಟ್ವಿಟ್ಟರ್ ನಲ್ಲಿ ತಿಳಿಸಿದ್ದಾರೆ.
ಒಂದು ಬಾರಿಯೂ ಕಪ್ ಗೆಲ್ಲದೇ ಆರ್ಸಿಬಿ ತಂಡ ತಮ್ಮ ಅಭಿಮಾನಿಗಳಿಗೆ ನಿರಾಸೆ ಮೂಡಿಸುತ್ತಲೇ ಇದ್ದು, ತಂಡದ ಬದಲಾವಣೆಯಿಂದ ಟ್ರೋಫಿ ಎತ್ತಿ ಹಿಡಿಯುತ್ತಾ ಕಾದುನೋಡಬೇಕಾಗಿದೆ.
