ಸೋಮವಾರದಂದು ದುಬೈನಲ್ಲಿ ನಡೆದ ಐಪಿಎಲ್ ನ 19ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.
ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆರಂಭಿಕ ಆಟಗಾರ ಪೃಥ್ವಿ ಶಾ 23 ಎಸೆತಗಳಲ್ಲಿ 42 ರನ್ ಗಳಿಸಿ ಮಹಮ್ಮದ್ ಸಿರಾಜ್ ಬೌಲಿಂಗ್ನಲ್ಲಿ ಔಟಾದರು. ನಂತರ ಶಿಖರ್ ಧವನ್ 32 ರನ್ ಗಳಿಸಿ ಔಟಾಗಿದ್ದು, ನಾಯಕ ಶ್ರೇಯಸ್ ಅಯ್ಯರ್ ಕೂಡ 11ರನ್ ಗಳಿಸಿ ಮೋಹಿನ್ ಅಲಿ ಅವರಿಗೆ ತಮ್ಮ ವಿಕೆಟ್ ಒಪ್ಪಿಸಿದರು. ರಿಷಬ್ ಪಂತ್ ಹಾಗೂ ಮಾರ್ಕೂಸ್ ಸ್ಟೋಯಿನಿಸ್ ಉತ್ತಮ ಜೊತೆಯಾಟವಾಡಿರು ರಿಷಬ್ ಪಂತ್ 37 ರನ್ ಗಳಿಸಿ ಔಟಾದರೆ ಮಾರ್ಕುಸ್ ಸ್ಟೋಯಿನಿಸ್ 26 ಎಸೆತಗಳಲ್ಲಿ (53) ರನ್ ಗಳಿಸುವ ಮೂಲಕ ಅಜೇಯರಾಗಿ ಉಳಿದರು. ಈ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ತಂಡ 4 ವಿಕೆಟ್ ನಷ್ಟಕ್ಕೆ 196ರನ್ ಗಳ ಮೊತ್ತ ದಾಖಲಿಸಿತು.
ಗುರಿ ಬೆನ್ನತ್ತಿದ ಆರ್ಸಿಬಿ ತಂಡದಲ್ಲಿ ಆರಂಭಿಕ ಆಟಗಾರ ದೇವದತ್ ಪಡಿಕಲ್ ಕೇವಲ 4 ರನ್ ಗಳಿಸಿ ಅಶ್ವಿನ್ ಬೌಲಿಂಗ್‌ನಲ್ಲಿ ಔಟಾದರು. ನಂತರ ಆರೊನ್ ಫಿಂಚ್ 13ರನ್ ಗಳಿಸಿ ಅಕ್ಸರ್ ಪಟೇಲ್ ಅವರಿಗೆ ತಮ್ಮ ವಿಕೆಟ್ ಒಪ್ಪಿಸಿದರು. ವಿರಾಟ್ ಕೊಹ್ಲಿ ಆರ್ಸಿಬಿ ತಂಡಕ್ಕೆ ಬೆನ್ನಲುಬಾಗಿ ನಿಂತಿದ್ದು, ಎಬಿ ಡಿ ವಿಲಿಯರ್ಸ್ 9 ರನ್ ಗಳಿಸಿ ಔಟಾದರು. ಬಳಿಕ ಬಂದ ಮೊಹಿನ್ ಅಲಿ ಕೂಡ 11 ರನ್ ಗಳಿಸಿ ಔಟಾದರು. ವಿರಾಟ್ ಕೊಹ್ಲಿ 43 ರನ್ ಗಳಿಸಿದ್ದು ರಬಾಡ ಎಸೆತದಲ್ಲಿ ಔಟಾದರು. ಸತತ ವಿಕೆಟ್‍ಗಳನ್ನು ಕಳೆದುಕೊಂಡು ಆರ್ ಸಿಬಿ ತಂಡ 9 ವಿಕೆಟ್ ನಷ್ಟಕ್ಕೆ 137 ರನ್ ಗಳಿಸಿ ಗುರಿ ತಲುಪುವಲ್ಲಿ ವಿಫಲರಾದರು. ಈ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ತಂಡ ಆರ್.ಸಿ.ಬಿ. ವಿರುದ್ಧ 59 ರನ್ ಗಳ ಭರ್ಜರಿ ಜಯ ಸಾಧಿಸಿತು.