alex Certify ಇಂದಿನ ಎಲಿಮಿನೇಟರ್ ಪಂದ್ಯದಲ್ಲಿ ಆರ್.ಸಿ.ಬಿ ಹಾಗೂ ಸನ್ ರೈಸರ್ಸ್ ಹೈದರಾಬಾದ್‌ ಕಾಳಗ…! ಯಾರಿಗೆ ಒಲಿಯಲಿದೆ ವಿಜಯಮಾಲೆ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದಿನ ಎಲಿಮಿನೇಟರ್ ಪಂದ್ಯದಲ್ಲಿ ಆರ್.ಸಿ.ಬಿ ಹಾಗೂ ಸನ್ ರೈಸರ್ಸ್ ಹೈದರಾಬಾದ್‌ ಕಾಳಗ…! ಯಾರಿಗೆ ಒಲಿಯಲಿದೆ ವಿಜಯಮಾಲೆ…?

ನಿನ್ನೆ ನಡೆದ ಐಪಿಎಲ್ ನ ಕ್ವಾಲಿಫೈಯರ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಜಯ ಗಳಿಸುವ ಮೂಲಕ ಫೈನಲ್ ಪ್ರವೇಶಿಸಿದ್ದು ಇಂದು ಅಬುಧಾಬಿಯಲ್ಲಿ ನಡೆಯುತ್ತಿರುವ ಎಲಿಮಿನೇಟರ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೇವಿಡ್ ವಾರ್ನರ್ ನಾಯಕತ್ವದ ಸನ್ ರೈಸರ್ಸ್ ಹೈದರಾಬಾದ್ ಮುಖಾಮುಖಿಯಾಗಲಿವೆ. ಇಂದು ಸೋತ ತಂಡ ಹೊರಹೋಗಲಿದೆ.

ಡೇವಿಡ್ ವಾರ್ನರ್ ನಾಯಕತ್ವದ ಸನ್ ರೈಸರ್ಸ್ ಹೈದರಾಬಾದ್ ತಂಡ 14 ಅಂಕ ಪಡೆದು (+0.608) ನೆಟ್ ರನ್ ರೇಟ್ ಮೂಲಕ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಬೌಲಿಂಗ್ ನಲ್ಲಿ ಈ ತಂಡ ಸಾಕಷ್ಟು ಬಲಿಷ್ಠವಾಗಿದೆ.

ವಿರಾಟ್ ಕೊಹ್ಲಿ ನಾಯಕತ್ವದ ಆರ್.ಸಿ.ಬಿ. ತಂಡ 14 ಪಾಯಿಂಟ್ ಗಳಿಸಿದ್ದು (-0.172) ನೆಟ್ ರನ್ ರೇಟ್ ಗಳಿಸುವ ಮೂಲಕ ಪಾಯಿಂಟ್ ಟೇಬಲ್ ನಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಇಂದು ಜಯಗಳಿಸಿದರೆ ತನ್ನ ಚೊಚ್ಚಲ ಐಪಿಎಲ್ ಕಪ್ ಆಸೆಯನ್ನು ಜೀವಂತವಾಗಿರಿಸಿಕೊಳ್ಳಲಿದೆ. ಇಂದು ಉಭಯ ತಂಡಗಳ ನಡುವೆ ಹೈ ವೋಲ್ಟೇಜ್ ಪಂದ್ಯ ನಡೆಯಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...