ಇಂದು ಅಹಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಐಪಿಎಲ್ ನ 22ನೇ ಪಂದ್ಯ ನಡೆಯುತ್ತಿದ್ದು, ವಿರಾಟ್ ಕೊಹ್ಲಿ ನಾಯಕತ್ವದ ಆರ್.ಸಿ.ಬಿ. ಹಾಗೂ ರಿಷಬ್ ಪಂತ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗಲಿವೆ.
ಪಂಜಾಬ್ ಕಿಂಗ್ಸ್ ವಿರುದ್ಧ ಕೆಕೆಆರ್ ಗೆ ಭರ್ಜರಿ ಜಯ
ವಿರಾಟ್ ಕೊಹ್ಲಿ ನಾಯಕತ್ವದ ಆರ್.ಸಿ.ಬಿ. ತಂಡ ಇದುವರೆಗೂ 5 ಪಂದ್ಯಗಳನ್ನಾಡಿದ್ದು, 4ರಲ್ಲಿ ಗೆದ್ದು 1 ಪಂದ್ಯದಲ್ಲಿ ಸೋಲು ಕಂಡಿದೆ. ಯುವ ಕ್ರಿಕೆಟಿಗ ರಿಷಬ್ ಪಂತ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ಕೂಡ 5 ಪಂದ್ಯಗಳಲ್ಲಿ 1 ಪಂದ್ಯದಲ್ಲಿ ಸೋತು 4 ಪಂದ್ಯಗಳಲ್ಲಿ ಜಯ ಸಾಧಿಸಿದೆ.
ಡೆಲ್ಲಿ ಕ್ಯಾಪಿಟಲ್ಸ್ ತಂಡ ನೆಟ್ ರನ್ ರೇಟ್ ನಿಂದ ಮುನ್ನಡೆಯಲ್ಲಿದ್ದು, ಐಪಿಎಲ್ ರ್ಯಾಂಕಿಂಗ್ ನಲ್ಲಿ ಎರಡನೇ ಸ್ಥಾನದಲ್ಲಿದೆ. ಇಂದಿನ ಪಂದ್ಯದಲ್ಲಿ ಯಾವ ತಂಡ ಗೆಲ್ಲುವುದೋ ಆ ತಂಡ ಐಪಿಎಲ್ ಅಂಕಪಟ್ಟಿಯಲ್ಲಿ ಮೊದಲನೇ ಸ್ಥಾನಕ್ಕೇರಲಿದೆ. ಉಭಯ ತಂಡಗಳಿಂದ ರನ್ ಹೊಳೆ ಹರಿಯುವ ಸಾಧ್ಯತೆ ಹೆಚ್ಚಿದೆ.