alex Certify ಇಂದು ಕಿಂಗ್ಸ್ ಇಲೆವೆನ್ ಪಂಜಾಬ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ಮುಖಾಮುಖಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು ಕಿಂಗ್ಸ್ ಇಲೆವೆನ್ ಪಂಜಾಬ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ಮುಖಾಮುಖಿ

ಇಂದು ಅಬುಧಾಬಿಯಲ್ಲಿ ನಡೆಯುವ ಐಪಿಎಲ್ ನ 24ನೇ ಪಂದ್ಯದಲ್ಲಿ ದಿನೇಶ್ ಕಾರ್ತಿಕ್ ನಾಯಕತ್ವದ ಕೆಕೆಆರ್ ತಂಡ ಹಾಗೂ ಕೆಎಲ್ ರಾಹುಲ್ ನಾಯಕತ್ವದ ಕಿಂಗ್ಸ್ ಇಲೆವನ್ ಪಂಜಾಬ್ ತಂಡ ಮುಖಾಮುಖಿಯಾಗಲಿವೆ.

ದಿನೇಶ್ ಕಾರ್ತಿಕ್ ನಾಯಕತ್ವದ ಕೆಕೆಆರ್ ತಂಡ 5 ಪಂದ್ಯಗಳಲ್ಲಿ 3 ಪಂದ್ಯದಲ್ಲಿ ಗೆಲುವು 2 ರಲ್ಲಿ ಸೋಲು ಕಂಡಿದ್ದು, 6 ಪಾಯಿಂಟ್ ಗಳಿಸುವ ಮೂಲಕ ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದೆ.

ಕೆಎಲ್ ರಾಹುಲ್ ನಾಯಕತ್ವದ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ಸೋಲಿನ ಸುಳಿಯಲ್ಲಿ ಸಿಲುಕಿಕೊಂಡಿದ್ದು, ಗೆಲುವಿನ ಹುಡುಕಾಟದಲ್ಲಿದೆ. ಇದುವರೆಗೂ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ 6 ಪಂದ್ಯಗಳಲ್ಲಿ ಕೇವಲ 1 ಪಂದ್ಯದಲ್ಲಿ ಜಯಿಸಿದ್ದು 5 ಪಂದ್ಯಗಳಲ್ಲಿ ಸೋಲನುಭವಿಸಿದೆ.

ಇಂದು ಪಂಜಾಬ್ ಗೆ ಗೆಲುವು ಅನಿವಾರ್ಯವಾಗಿದೆ. 3-30 ಕ್ಕೆ ಪಂದ್ಯ ಪ್ರಸಾರವಾಗುತ್ತಿದ್ದು ಉಭಯ ತಂಡಗಳಲ್ಲಿ ಯಾರಿಗೆ ಜಯ ಸಿಗುವುದು ಕಾದು ನೋಡಬೇಕಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...