
ಇಂದು ಅಬುಧಾಬಿಯಲ್ಲಿ ಐಪಿಎಲ್ ನ 8ನೇ ಪಂದ್ಯ ನಡೆಯಲಿದ್ದು, ಸನ್ ರೈಸರ್ಸ್ ಹೈದರಾಬಾದ್ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ಮುಖಾಮುಖಿಯಾಗಲಿವೆ. ಎರಡು ತಂಡಗಳು ತಮ್ಮ ಮೊದಲ ಪಂದ್ಯದಲ್ಲಿ ಸೋತಿದ್ದು, ಇಂದು ಗೆಲುವಿಗಾಗಿ ಕಾದಾಟ ನಡೆಸಲಿವೆ.
ದಿನೇಶ್ ಕಾರ್ತಿಕ್ ನಾಯಕತ್ವದ ಕೆಕೆಆರ್ ತಂಡ ತಮ್ಮ ಮೊದಲನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಸೋಲು ಕಂಡಿತ್ತು. ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದಿನೇಶ್ ಕಾರ್ತಿಕ್, ನಮ್ಮ ಆಟಗಾರರು ಮುಂದಿನ ಪಂದ್ಯದಲ್ಲಿ ಉತ್ತಮ ಪ್ರದರ್ಶನ ತೋರುತ್ತಾರೆ ಎಂದಿದ್ದರು. ಇಂದು ಕೆಕೆಆರ್ ತಂಡ ಗೆಲ್ಲಬೇಕೆಂಬ ಛಲದಲ್ಲಿದೆ.
ಡೇವಿಡ್ ವಾರ್ನರ್ ನಾಯಕತ್ವದ ಸನ್ ರೈಸರ್ಸ್ ಹೈದರಾಬಾದ್ ತಂಡ ತಮ್ಮ ಮೊದಲನೇ ಪಂದ್ಯದಲ್ಲಿ ಆರ್ಸಿಬಿ ವಿರುದ್ಧ ಸೋಲು ಕಂಡಿದ್ದು, ಇಂದು ಗೆಲ್ಲಬೇಕೆಂಬ ಉತ್ಸಾಹದಲ್ಲಿದ್ದಾರೆ. ಉಭಯ ತಂಡಗಳು ಗೆಲುವಿಗಾಗಿ ಸೆಣಸಾಟ ನಡೆಸಲಿವೆ.