alex Certify ಇಂದು ಕ್ವಾಲಿಫೈಯರ್ ನ ಮೊದಲನೇ ಪಂದ್ಯ: ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಹಣಾಹಣಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು ಕ್ವಾಲಿಫೈಯರ್ ನ ಮೊದಲನೇ ಪಂದ್ಯ: ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಹಣಾಹಣಿ

ಇಂದು ದುಬೈನಲ್ಲಿ ನಡೆಯಲಿರುವ ಐಪಿಎಲ್ ನ ಕ್ವಾಲಿಫೈಯರ್ 1 ರಲ್ಲಿ ರೋಹಿತ್ ಶರ್ಮಾ ನಾಯಕತ್ವದ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಹಾಗೂ ಶ್ರೇಯಸ್ ಅಯ್ಯರ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗಲಿವೆ.

ಮುಂಬೈ ಇಂಡಿಯನ್ಸ್ ತಂಡ ಈಗಾಗಲೇ 4 ಬಾರಿ ಟ್ರೋಫಿ ಎತ್ತಿ ಹಿಡಿದಿದೆ. ಈ ಬಾರಿಯ ಐಪಿಎಲ್ ನಲ್ಲಿ 18 ಪಾಯಿಂಟ್ ಪಡೆಯುವ ಮೂಲಕ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದ್ದು ಇಂದಿನ ಪಂದ್ಯದಲ್ಲಿ ಮಿಂಚಲು ಸಜ್ಜಾಗಿದ್ದಾರೆ.

ಯುವ ಆಟಗಾರ ಶ್ರೇಯಸ್ ಅಯ್ಯರ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಮ್ಮ ಮೊದಲನೇ ಕಪ್ ಗೆಲ್ಲುವ ಉತ್ಸಾಹದಲ್ಲಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ 16 ಅಂಕ ಪಡೆದು ಅಂಕಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದು ಮುಂಬೈ ಇಂಡಿಯನ್ಸ್ ಗೆ ಪೈಪೋಟಿ ನೀಡುವ ನಿರೀಕ್ಷೆಯಲ್ಲಿದ್ದಾರೆ. ಎರಡು ತಂಡಗಳು ಬಲಿಷ್ಠವಾಗಿದ್ದು ಇಂದು ಯಾರಿಗೆ ಜಯ ಒಲಿಯಲಿದೆ ಕಾದು ನೋಡಬೇಕಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...