alex Certify ಇಂದು ಮುಂಬೈ ಇಂಡಿಯನ್ಸ್ ಗೆ ಡೆಲ್ಲಿ ಕ್ಯಾಪಿಟಲ್ಸ್ ಸವಾಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು ಮುಂಬೈ ಇಂಡಿಯನ್ಸ್ ಗೆ ಡೆಲ್ಲಿ ಕ್ಯಾಪಿಟಲ್ಸ್ ಸವಾಲು

ಇಂದು ಚೆನ್ನೈನ ಚಿದಂಬರಂ ಸ್ಟೇಡಿಯಂನಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗಲಿವೆ. ಐಪಿಎಲ್ ನ 13ನೇ ಪಂದ್ಯ ಇದಾಗಿದ್ದು, ಕಳೆದ ಐಪಿಎಲ್ ಆವೃತ್ತಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಫೈನಲ್ ನಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಸೋಲನುಭವಿಸಿತ್ತು. ಈ ಸೋಲಿನ ಸೇಡನ್ನು ತೀರಿಸಿಕೊಳ್ಳಲು ಡೆಲ್ಲಿ ಕ್ಯಾಪಿಟಲ್ಸ್ ಸಜ್ಜಾಗಿದೆ.

ರೋಹಿತ್ ಶರ್ಮ ನಾಯಕತ್ವದ ಮುಂಬೈ ಇಂಡಿಯನ್ಸ್ 5 ಬಾರಿ ಟ್ರೋಫಿ ಗೆದ್ದಿರುವ ಬಲಿಷ್ಠ ತಂಡವಾಗಿದೆ. ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಇದುವರೆಗೂ 28 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು ಮುಂಬೈ ಇಂಡಿಯನ್ಸ್ 16 ಪಂದ್ಯಗಳನ್ನು ಗೆದ್ದಿದ್ದು ಡೆಲ್ಲಿ ಕ್ಯಾಪಿಟಲ್ಸ್ 12 ಪಂದ್ಯಗಳಲ್ಲಿ ಗೆಲುವು ಕಂಡಿದೆ.

ಯುವ ಕ್ರಿಕೆಟಿಗ ರಿಷಬ್ ಪಂತ್ ನಾಯಕನಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮುನ್ನಡೆಸುತ್ತಿದ್ದು, ಮುಂಬೈ ಇಂಡಿಯನ್ಸ್ ಗೆ ಯಾವ ರೀತಿ ಸವಾಲಾಕಲಿದ್ದಾರೆ ಕಾದು ನೋಡಬೇಕಿದೆ. ಇನ್ನು ಉಭಯ ತಂಡಗಳು 1 ಪಂದ್ಯದಲ್ಲಿ ಸೋತು 2 ಪಂದ್ಯಗಳಲ್ಲಿ ಗೆದ್ದಿದ್ದಾರೆ. ನೆಟ್ ರನ್ ರೇಟ್ ನಿಂದ ಡೆಲ್ಲಿ ಕ್ಯಾಪಿಟಲ್ಸ್ 3ನೇ ಸ್ಥಾನದಲ್ಲಿದ್ದರೆ ಮುಂಬೈ ಇಂಡಿಯನ್ಸ್ 4ನೇ ಸ್ಥಾನದಲ್ಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...