
ಇಂದು ಐಪಿಎಲ್ ನ ಮೂರನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್ ರೈಸರ್ಸ್ ಹೈದರಾಬಾದ್ ಮುಖಾಮುಖಿಯಾಗಲಿದ್ದು, ಪ್ರೇಕ್ಷಕರು ಕಾತುರದಿಂದ ಕಾಯುತ್ತಿದ್ದಾರೆ.
ವಿರಾಟ್ ಕೊಹ್ಲಿ ನಾಯಕತ್ವದ ಆರ್.ಸಿ.ಬಿ. ತಂಡ ಇದುವರೆಗೂ ಟ್ರೋಫಿ ಗೆದ್ದಿಲ್ಲ. ಈ ಬಾರಿಯಾದರೂ ಟ್ರೋಫಿ ಎತ್ತಿ ಹಿಡಿಯಬೇಕೆಂಬ ನಿರೀಕ್ಷೆಯಲ್ಲಿದ್ದಾರೆ.
ಡೇವಿಡ್ ವಾರ್ನರ್ ನಾಯಕತ್ವದ ಸನ್ ರೈಸರ್ಸ್ ಹೈದರಾಬಾದ್ ತಂಡ ಬೌಲಿಂಗ್ ನಲ್ಲಿ ತುಂಬಾ ಬಲಿಷ್ಠವಾಗಿದೆ. ಈ ಎರಡು ತಂಡದಲ್ಲಿ ಇಂದು ಯಾರಿಗೆ ಜಯ ಸಿಗುತ್ತದೆ ಎಂಬುದನ್ನು ಕಾದುನೋಡಬೇಕಾಗಿದೆ.