ಇಂದು ದುಬೈನಲ್ಲಿ ನಡೆಯುವ 6ನೇ ಐಪಿಎಲ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೆ.ಎಲ್. ರಾಹುಲ್ ನಾಯಕತ್ವದ ಪಂಜಾಬ್ ಕಿಂಗ್ಸ್ ಇಲೆವನ್ ಮುಖಾಮುಖಿಯಾಗಲಿದ್ದು, ಈ ಪಂದ್ಯಕ್ಕಾಗಿ ಪ್ರೇಕ್ಷಕರು ಕಾತುರದಿಂದ ಕಾಯುತ್ತಿದ್ದಾರೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈಗಾಗಲೇ ತನ್ನ ಮೊದಲನೇ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯ ಕಂಡಿದ್ದು, ಗೆಲುವಿನ ಓಟ ಮುಂದುವರಿಸುವ ಉತ್ಸಾಹದಲ್ಲಿದೆ.
ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ತನ್ನ ಮೊದಲನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೋಲನುಭವಿಸಿದ್ದು ಇಂದು ಜಯದ ನಿರೀಕ್ಷೆಯಲ್ಲಿದ್ದಾರೆ. ಈ ತಂಡದಲ್ಲಿ ಕನ್ನಡಿಗರು ಹೆಚ್ಚಾಗಿ ಇರುವುದು ಇನ್ನೊಂದು ವಿಶೇಷವಾಗಿದೆ. ಇಂದು ಎರಡು ತಂಡಗಳು ಮುಖಾಮುಖಿಯಾಗಲಿವೆ.