alex Certify ಇಂದು IPL ನ ಎರಡನೇ ಪಂದ್ಯ: ಚೆನ್ನೈ ಸೂಪರ್ ಕಿಂಗ್ಸ್ – ಡೆಲ್ಲಿ ಕ್ಯಾಪಿಟಲ್ಸ್ ಸೆಣಸಾಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು IPL ನ ಎರಡನೇ ಪಂದ್ಯ: ಚೆನ್ನೈ ಸೂಪರ್ ಕಿಂಗ್ಸ್ – ಡೆಲ್ಲಿ ಕ್ಯಾಪಿಟಲ್ಸ್ ಸೆಣಸಾಟ

ಇಂದು ಐಪಿಎಲ್ 14ನೇ ಆವೃತ್ತಿಯ ಎರಡನೇ ಪಂದ್ಯದಲ್ಲಿ ಚೆನ್ನೈ ಸೂಪರ್‌ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗಲಿದೆ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯುತ್ತಿದ್ದು ಪ್ರೇಕ್ಷಕರು ಕಾತರದಿಂದ ಕಾಯುತ್ತಿದ್ದಾರೆ.

ಕ್ಯಾಪ್ಟನ್ ಕೂಲ್ ಎಂಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಐಪಿಎಲ್ ನಲ್ಲಿ 3ಬಾರಿ ಟ್ರೋಫಿ ಎತ್ತಿ ಹಿಡಿದಿದೆ. ಕೆ ಗೌತಮ್, ರಾಬಿನ್ ಉತ್ತಪ್ಪ ಹಾಗೂ ಮೋಯಿನ್ ಅಲಿ ಈ ಬಾರಿ ಚೆನ್ನೈ ಸೂಪರ್ ಕಿಂಗ್ಸ್ ಪರ ಕಣಕ್ಕಿಳಿಯುತ್ತಿದ್ದಾರೆ, ಹಾಗೂ ಸುರೇಶ್ ರೈನಾ ಕೂಡ ತಂಡದಲ್ಲಿ ಸೇರ್ಪಡೆಯಾಗಿದ್ದು ಬ್ಯಾಟಿಂಗ್ ನಲ್ಲಿ ಬಲಿಷ್ಠವಾಗಿದೆ.

ಡೆಲ್ಲಿ ಕ್ಯಾಪಿಟಲ್ಸ್ ತಂಡ ಇದುವರೆಗೂ ಕಪ್ ಗೆಲ್ಲುವಲ್ಲಿ ವಿಫಲವಾಗಿದೆ. ಕಳೆದ ಐಪಿಎಲ್ ಸೀಜನ್ ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ರನ್ನರ್ ಅಪ್ ಆಗಿತ್ತು ಶ್ರೇಯಸ್ ಅಯ್ಯರ್ ಗಾಯದ ಸಮಸ್ಯೆಯಿಂದ ಐಪಿಎಲ್ ನಿಂದ ದೂರ ಉಳಿದಿದ್ದು ಎಂಎಸ್ ಧೋನಿ ಅವರ ಶಿಷ್ಯ ವಿಕೇಟ್ ಕೀಪರ್ ರಿಷಭ್ ಪಂತ್ ನಾಯಕರಾಗಿ ತಂಡವನ್ನು ಮುನ್ನಡೆಸುತ್ತಿದ್ದಾರೆ. ಇನ್ನೊಂದು ವಿಶೇಷವೆಂದರೆ ಎರಡು ತಂಡಗಳ ನಾಯಕರು ವಿಕೆಟ್ ಕೀಪರ್ ಗಳೇ ಆಗಿದ್ದಾರೆ ಇಂದು ಎರಡು ತಂಡಗಳ ನಡುವೆ ಜಿದ್ದಾ ಜಿದ್ದಿನ ಹೋರಾಟ ನಡೆಯಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...