alex Certify ಇನ್ಸ್ಟಾಗ್ರಾಮ್ ನಲ್ಲಿ ದಾಖಲೆ ಬರೆದ ಚೆನ್ನೈ ಸೂಪರ್‌ಕಿಂಗ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇನ್ಸ್ಟಾಗ್ರಾಮ್ ನಲ್ಲಿ ದಾಖಲೆ ಬರೆದ ಚೆನ್ನೈ ಸೂಪರ್‌ಕಿಂಗ್ಸ್

ಏಪ್ರಿಲ್ 9ರಿಂದ ಐಪಿಎಲ್ 14ನೇ ಆವೃತ್ತಿ ಶುರುವಾದಾಗಿನಿಂದ ಕ್ರಿಕೆಟ್ ಪ್ರೇಮಿಗಳಿಗೆ ಒಳ್ಳೆಯ ಮನರಂಜನೆ ಸಿಗುತ್ತಿದೆ. ಇದರ ಬೆನ್ನಲ್ಲೇ ಚೆನ್ನೈ ಸೂಪರ್‌ಕಿಂಗ್ಸ್ ತಂಡ ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಮ್ ನಲ್ಲಿ ಹೊಸ ದಾಖಲೆಯೊಂದನ್ನು ಮಾಡಿದ್ದಾರೆ.

ಎಂಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಅಪಾರ ಅಭಿಮಾನಿಗಳನ್ನು ಹೊಂದಿದ್ದು. ಪ್ರೇಕ್ಷಕರಿಗೆ ಮನರಂಜನೆ ಕೊಡುತ್ತಲೇ ಬಂದಿದೆ. ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಮ್ ನಲ್ಲಿ ಚೆನ್ನೈ ಸೂಪರ್‌ಕಿಂಗ್ಸ್ ತಂಡದ ಫಾಲೋವರ್ಸ್ ಗಳ ಸಂಖ್ಯೆ  7 ಮಿಲಿಯನ್ ಮುಟ್ಟಿದೆ. ಈ ಸಂತಸವನ್ನು ಚೆನ್ನೈ ಸೂಪರ್ ಕಿಂಗ್ಸ್ ತಮ್ಮ ಇನ್ ಸ್ಟಾಗ್ರಾಂನಲ್ಲಿ ಹಂಚಿಕೊಂಡಿದೆ. ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಟಗಾರರು 7 ಮಿಲಿಯನ್ ಸ್ಟ್ರಾಂಗ್ ಎಂದು ಹೇಳಿದ್ದಾರೆ.

ವಿರಾಟ್ ಕೊಹ್ಲಿ ಅಭಿಮಾನಿಗಳಿಗೆ ಶಾಕಿಂಗ್ ನ್ಯೂಸ್: ಅಗ್ರಸ್ಥಾನಕ್ಕೇರಿದ ಪಾಕ್ ನಾಯಕ

ಚೆನ್ನೈ ಸೂಪರ್‌ಕಿಂಗ್ಸ್ ಫ್ರಾಂಚೈಸಿ ತನ್ನ ಅಧಿಕೃತ ಇನ್ ಸ್ಟಾಗ್ರಾಂನಲ್ಲಿ ಈ ಸಂತಸವನ್ನು ಹಂಚಿಕೊಂಡಿದ್ದು ಈ ಮೂಲಕ ಇನ್ ಸ್ಟಾಗ್ರಾಂನಲ್ಲಿ ಅತಿ ಹೆಚ್ಚು ಫಾಲೋವರ್ಸ್ ಗಳನ್ನು ಹೊಂದಿರುವ ತಂಡಗಳಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮೊದಲ ಸ್ಥಾನದಲ್ಲಿದೆ. ಮುಂಬೈ ಇಂಡಿಯನ್ಸ್ ತಂಡ 6.9 ಮಿಲಿಯನ್ ಅನುಯಾಯಿಗಳನ್ನು ಹೊಂದಿದ್ದು ಎರಡನೇ ಸ್ಥಾನದಲ್ಲಿದೆ. ಇನ್ನು ಆರ್ ಸಿ ಬಿ ತಂಡ 6.1 ಮಿಲಿಯನ್ ಫಾಲೋವರ್ಸ್ ಪಡೆಯುವ ಮೂಲಕ ಮೂರನೇ ಸ್ಥಾನದಲ್ಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...