alex Certify ಈ ಬಾರಿಯ ಐಪಿಎಲ್ ನಿಂದ ದೂರ ಉಳಿದ ರಾಜಸ್ಥಾನ್ ರಾಯಲ್ಸ್ ತಂಡದ ವೇಗಿ ಜೋಫ್ರಾ ಆರ್ಚರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಈ ಬಾರಿಯ ಐಪಿಎಲ್ ನಿಂದ ದೂರ ಉಳಿದ ರಾಜಸ್ಥಾನ್ ರಾಯಲ್ಸ್ ತಂಡದ ವೇಗಿ ಜೋಫ್ರಾ ಆರ್ಚರ್

ಇಂಗ್ಲೆಂಡ್ ತಂಡದ ವೇಗದ ಬೌಲರ್ ಜೋಫ್ರಾ ಆರ್ಚರ್ ಭಾರತ ಹಾಗೂ ಇಂಗ್ಲೆಂಡ್ ನಡುವಣ ಸರಣಿಯ ಸಮಯದಲ್ಲಿ ಗಾಯಗೊಂಡಿದ್ದು, ಜೋಫ್ರಾ ಆರ್ಚರ್ ಐಪಿಎಲ್ ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಪ್ರಮುಖ ಅಸ್ತ್ರವಾಗಿದ್ದರು.

ಕಳೆದ ಐಪಿಎಲ್ ನಲ್ಲಿ ಬೌಲಿಂಗ್‌ ಮಾತ್ರವಲ್ಲದೆ ಬ್ಯಾಟಿಂಗ್ ನಲ್ಲೂ ಭರ್ಜರಿ ಪ್ರದರ್ಶನ ತೋರಿದ್ದರು. ಕೈ ಗಾಯದ ಸಮಸ್ಯೆಯಿಂದ ಜೋಫ್ರಾ ಆರ್ಚರ್ ಈ ಬಾರಿಯ ಐಪಿಎಲ್ ನಿಂದ ಹೊರಗುಳಿಯಲಿದ್ದಾರೆ.

ಈ ಕುರಿತು ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ತನ್ನ ಅಧಿಕೃತ ಟ್ವಿಟ್ಟರ್ ನಲ್ಲಿ ತಿಳಿಸಿದೆ. ಇನ್ನು ಈ ಬಾರಿಯ ಐಪಿಎಲ್ ನಲ್ಲಿ ಈಗಾಗಲೇ 4 ಪಂದ್ಯಗಳನ್ನಾಡಿರುವ ರಾಜಸ್ಥಾನ್ ರಾಯಲ್ಸ್ ತಂಡ ಕೇವಲ 1 ಪಂದ್ಯದಲ್ಲಿ ಜಯಗಳಿಸಿದ್ದು, ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಜೋಫ್ರಾ ಆರ್ಚರ್ ತಂಡದಲ್ಲಾಡದೇ ಇರುವುದು ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಇನ್ನಷ್ಟು ಆಘಾತವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...