ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅನಾರೋಗ್ಯದಿಂದ ಇಹಲೋಕ ತ್ಯಜಿಸಿದ್ದು ಸಿನಿಮಾ ರಂಗದವರಷ್ಟೇ ಅಲ್ಲದೆ ಕ್ರಿಕೆಟಿಗರು ಕೂಡ ಎಸ್.ಪಿ. ಬಾಲಸುಬ್ರಮಣ್ಯಂ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ಎಸ್.ಪಿ. ಬಾಲಸುಬ್ರಮಣ್ಯಂ ಅವರು ತಮ್ಮ ಮಧುರವಾದ ಕಂಠದಿಂದ 40,000ಕ್ಕೂ ಹೆಚ್ಚು ಹಾಡುಗಳನ್ನು ಹಾಡಿ ಸಂಗೀತ ಸಾಮ್ರಾಟರಾಗಿದ್ದರು.
ಅವರ ಅಗಲಿಕೆಗೆ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಸೇರಿದಂತೆ ಸಾಕಷ್ಟು ಕ್ರಿಕೆಟಿಗರು ಸಾಮಾಜಿಕ ಜಾಲತಾಣದಲ್ಲಿ ಸಂತಾಪ ಸೂಚಿಸಿದ್ದಾರೆ.