
ಈ ಬಾರಿಯ ಐಪಿಎಲ್ ಯುಎಇನಲ್ಲಿ ನಡೆಯಲಿದ್ದು, ಇಂಗ್ಲೆಂಡ್ ನ ಆಲ್ ರೌಂಡರ್ ಬೆನ್ ಸ್ಟೋಕ್ಸ್ ಐಪಿಎಲ್ ನಲ್ಲಿ ಕಣಕ್ಕಿಳಿಯುವ ಸಾಧ್ಯತೆ ಇಲ್ಲ ಎಂದು ಹೇಳಲಾಗಿದೆ.
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಇದೊಂದು ಆಘಾತಕಾರಿ ವಿಷಯವಾದಂತಾಗಿದೆ.
ನ್ಯೂಜಿಲ್ಯಾಂಡ್ ನ ಆಸ್ಪತ್ರೆಯಲ್ಲಿ ಅವರ ತಂದೆ ಮಿದುಳಿನ ಕ್ಯಾನ್ಸರ್ ಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆನ್ ಸ್ಟೋಕ್ಸ್ ನ್ಯೂಜಿಲೆಂಡ್ ಗೆ ತೆರಳಿದ್ದಾರೆ.
ತಂದೆ ಆರೋಗ್ಯ ಸರಿ ಹೋಗದಿದ್ದರೆ ಅವರು ಐಪಿಎಲ್ ನಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇಲ್ಲ ಎಂದು ಹೇಳಲಾಗಿದೆ.