
ನಿನ್ನೆ ನಡೆದ ಪಂಜಾಬ್ ಕಿಂಗ್ಸ್ ಇಲೆವೆನ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ರೋಚಕ ಪಂದ್ಯದಲ್ಲಿ ಮಾಯಾಂಕ್ ಅಗರ್ವಾಲ್ ಅವರ ಅತ್ಯುತ್ತಮ ಬ್ಯಾಟಿಂಗ್ ನಿಂದ ಪಂದ್ಯ ಡ್ರಾ ಆಗಿತ್ತು. ಆದರೆ ಸೂಪರ್ ಓವರ್ ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಜಯ ಸಾಧಿಸಿದೆ.
ಕಿಂಗ್ಸ್ ಇಲೆವನ್ ಪಂಜಾಬ್ ತಂಡದ ಆಟಗಾರರಾದ ಮಾಯಾಂಕ್ ಅಗರ್ವಾಲ್ ಹಾಗೂ ಕೃಷ್ಣಪ್ಪ ಗೌತಮ್ ಇಬ್ಬರೂ ಆಟವಾಡುವಾಗ ಕನ್ನಡದಲ್ಲಿ ಮಾತನಾಡಿದ್ದಾರೆ. ರನ್ ಗಳಿಸುವ ವೇಳೆ ಬಾ…..ಬಾ…..ಹಾಗೂ ಬರಬೇಡ…..ಬೇಡ….ಎಂದು ಕನ್ನಡದಲ್ಲಿ ಮಾತನಾಡಿರುವುದು ಲೈವ್ ನಲ್ಲಿ ಕೇಳಿಬಂದಿದೆ.