ಕ್ಯಾಪ್ಟನ್ ಕೂಲ್ ಎಂ ಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್‌ಕಿಂಗ್ಸ್ ಹಾಗೂ ಇಯಾನ್ ಮೊರ್ಗನ್ ನಾಯಕತ್ವದ ಕೋಲ್ಕತ್ತಾ ನೈಟ್ ರೈಡರ್ಸ್ ಇಂದು ಐಪಿಎಲ್ ನ 15ನೇ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ. ಮುಂಬೈನ ವಾಂಕೆಡೆ ಸ್ಟೇಡಿಯಂ ನಲ್ಲಿ ಈ ಪಂದ್ಯ ನಡೆಯುತ್ತಿದ್ದು ಸಂಜೆ 7.30ಕ್ಕೆ ಪಂದ್ಯ ಆರಂಭವಾಗಲಿದೆ.
ಎಂ ಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್‌ಕಿಂಗ್ಸ್ ತಂಡ ಈಗಾಗಲೇ ಆಡಿರುವ ಮೂರು ಪಂದ್ಯಗಳಲ್ಲಿ 1 ಪಂದ್ಯವನ್ನು ಸೋತು ಎರಡು ಪಂದ್ಯಗಳಲ್ಲಿ ಗೆದ್ದಿದೆ. ಕಳೆದ ಪಂದ್ಯದಲ್ಲಿ ಚೆನ್ನೈ ಸೂಪರ್‌ಕಿಂಗ್ಸ್ ತಂಡದ ಆಲ್ರೌಂಡರ್ ರವೀಂದ್ರ ಜಡೇಜಾ 2 ವಿಕೆಟ್ ಗಳನ್ನು ತೆಗೆದು 4 ಅಮೋಘ ಕ್ಯಾಚ್ ಗಳನ್ನು ಹಿಡಿದು ತಂಡಕ್ಕೆ ನೆರವಾಗಿದ್ದರು, ಮೋಯಿನ್ ಅಲಿ ಕೂಡ ಕೇವಲ 2 ರನ್ ಗಳನ್ನು ನೀಡಿ 3 ವಿಕೆಟ್ ಗಳನ್ನು ಕಬಳಿಸಿದ್ದರು. ಇವರಿಬ್ಬರ ಭರ್ಜರಿ ಪ್ರದರ್ಶನದಿಂದ ಚೆನ್ನೈ ಸೂಪರ್‌ಕಿಂಗ್ಸ್ ತಂಡದ ಆತ್ಮವಿಶ್ವಾಸ ಇನ್ನಷ್ಟು ಹೆಚ್ಚಿದೆ.
ನಿನ್ನೆಯ ಪಂದ್ಯದಲ್ಲಿ ಹೊಸ ದಾಖಲೆ ಮಾಡಿದ ಹಿಟ್ ಮ್ಯಾನ್ ರೋಹಿತ್ ಶರ್ಮ
ಇಯಾನ್ ಮೋರ್ಗನ್ ನಾಯಕತ್ವದ ಕೆಕೆಆರ್ ತಂಡ ಮೂರು ಪಂದ್ಯಗಳನ್ನಾಡಿದ್ದು 1 ಪಂದ್ಯದಲ್ಲಿ ಗೆದ್ದು 2 ಪಂದ್ಯಗಳಲ್ಲಿ ಸೋಲನುಭವಿಸಿದೆ. ಪಾಯಿಂಟ್ ಟೇಬಲ್ ನಲ್ಲಿ 5ನೇ ಸ್ಥಾನದಲ್ಲಿದೆ.ನಎರಡು ತಂಡಗಳು ಇದುವರೆಗೂ 24ಬಾರಿ ಮುಖಾಮುಖಿಯಾಗಿದ್ದು, ಚೆನ್ನೈ ಸೂಪರ್‌ಕಿಂಗ್ಸ್ 15 ಪಂದ್ಯಗಳಲ್ಲಿ ಜಯ ಕಂಡರೆ ಕೆಕೆಆರ್ 9 ಪಂದ್ಯಗಳಲ್ಲಿ ಗೆಲುವು ದಾಖಲಿಸಿದೆ.