alex Certify ಐಸಿಸಿ ರ್ಯಾಂಕಿಂಗ್ ಪಟ್ಟಿ ಪ್ರಕಟ: 2ನೇ ಸ್ಥಾನ ಉಳಿಸಿಕೊಂಡ ಕೊಹ್ಲಿ – 9ನೇ ಸ್ಥಾನಕ್ಕೆ ಕುಸಿದ ಬುಮ್ರಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಐಸಿಸಿ ರ್ಯಾಂಕಿಂಗ್ ಪಟ್ಟಿ ಪ್ರಕಟ: 2ನೇ ಸ್ಥಾನ ಉಳಿಸಿಕೊಂಡ ಕೊಹ್ಲಿ – 9ನೇ ಸ್ಥಾನಕ್ಕೆ ಕುಸಿದ ಬುಮ್ರಾ

ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ಐಸಿಸಿ, ಟೆಸ್ಟ್ ಕ್ರಿಕೆಟ್ ರ್ಯಾಂಕಿಂಗ್ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಬ್ಯಾಟ್ಸ್ ಮನ್‌ಗಳ ಪಟ್ಟಿಯಲ್ಲಿ ಎರಡನೇ ಸ್ಥಾನ ಉಳಿಸಿಕೊಂಡಿದ್ದಾರೆ.

ಮಂಗಳವಾರ ಬಿಡುಗಡೆಯಾದ ಪಟ್ಟಿಯಲ್ಲಿ ವೇಗದ ಬೌಲರ್ ಜಸ್ಪ್ರಿತ್ ಬುಮ್ರಾ ಒಂಬತ್ತನೇ ಸ್ಥಾನಕ್ಕೆ ಕುಸಿದಿದ್ದಾರೆ. ಕೊಹ್ಲಿ 886 ಅಂಕಗಳೊಂದಿಗೆ ಎರಡನೇ ಸ್ಥಾನವನ್ನು ಉಳಿಸಿಕೊಂಡಿದ್ದಾರೆ. ಚೇತೇಶ್ವರ ಪೂಜಾರ (766) ಮತ್ತು ಅಜಿಂಕ್ಯ ರಹಾನೆ (726) ಕ್ರಮವಾಗಿ ಎಂಟನೇ ಮತ್ತು ಹತ್ತನೇ ಸ್ಥಾನ ಉಳಿಸಿಕೊಂಡಿದ್ದಾರೆ.

ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್ ಅಗ್ರ ಸ್ಥಾನದಲ್ಲಿದ್ದಾರೆ. ಬೌಲರ್‌ಗಳ ಪಟ್ಟಿಯಲ್ಲಿ ಬುಮ್ರಾ ಒಂದು ಸ್ಥಾನದಿಂದ ಒಂಬತ್ತನೇ ಸ್ಥಾನಕ್ಕೆ ಕುಸಿದಿದ್ದಾರೆ. ರವೀಂದ್ರ ಜಡೇಜಾ ಆಲ್‌ರೌಂಡರ್‌ಗಳ ಪಟ್ಟಿಯಲ್ಲಿ ಮೂರನೇ ಸ್ಥಾನ ಉಳಿಸಿಕೊಂಡಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...