ಟೀಮ್ ಇಂಡಿಯಾದ ಅತ್ಯುತ್ತಮ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಹಾಲ್ ಐಪಿಎಲ್ 14ನೇ ಆವೃತ್ತಿಯಲ್ಲಿ ಆರ್ ಸಿ ಬಿ ಪರ ಕಣಕ್ಕಿಳಿಯಲು ಸಜ್ಜಾಗುತ್ತಿದ್ದು, ಯುಜ್ವೇಂದ್ರ ಚಹಾಲ್ ತಮ್ಮ ಟ್ವಿಟ್ಟರ್ ನಲ್ಲಿ ಕನ್ನಡದಲ್ಲಿ ಬರೆದುಕೊಳ್ಳುವ ಮೂಲಕ ಸಂತೋಷ ವ್ಯಕ್ತಪಡಿಸಿದ್ದಾರೆ.
ಇಂದಿನಿಂದ ವಿಮಾನ ಪ್ರಯಾಣಿಕರ ಜೇಬಿಗೆ ಬೀಳ್ತಿದೆ ಕತ್ತರಿ
ಆರ್ ಸಿ ಬಿ ಕುಟುಂಬದೊಂದಿಗೆ ಮತ್ತೆ ಒಂದಾಗಲು ನನಗೆ ತುಂಬಾ ಸಂತೋಷವಾಗಿದೆ! ಎಂದು ಚಹಾಲ್ ಟ್ವೀಟ್ ಮಾಡಿದ್ದು ಕನ್ನಡಿಗರಿಂದ ಮೆಚ್ಚುಗೆಯ ಮಹಾಪೂರವೇ ಹರಿದು ಬಂದಿದೆ. ನಮ್ಮವರೇ ಕನ್ನಡ ಮರೆಯುವ ಸಮಯದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟಿಗರಿಂದ ಕನ್ನಡ, ನಿಮ್ಮ ಕನ್ನಡ ಪ್ರೇಮಕ್ಕೆ ಧನ್ಯವಾದಗಳು ಎಂದು ಕೆಲವರು ಕಮೆಂಟ್ಸ್ ಮಾಡಿದ್ದಾನೆ.