alex Certify ‘ಕಪ್ ನಮ್ದೇ’ ಎನ್ನುತ್ತಿದ್ದವರ ಕಂಗಳಲ್ಲಿ ಚಿಗುರಿದ ಕನಸು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಕಪ್ ನಮ್ದೇ’ ಎನ್ನುತ್ತಿದ್ದವರ ಕಂಗಳಲ್ಲಿ ಚಿಗುರಿದ ಕನಸು

ಪ್ರತಿಬಾರಿ ಐಪಿಎಲ್ ಪಂದ್ಯಾವಳಿಗಳು ನಡೆದಾಗಲೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳು ಈ ಸಲ ‘ಕಪ್ ನಮ್ದೇ’ ಎನ್ನುತ್ತಿದ್ದರು. ಆದರೆ ಪ್ರತಿಬಾರಿಯೂ ಅವರಿಗೆ ನಿರಾಸೆ ಕಾದಿರುತ್ತಿತ್ತು.

ಇದೀಗ ಕೊರೊನಾ ಕಾರಣದಿಂದ ಪ್ರೇಕ್ಷಕ ರಹಿತ ಐಪಿಎಲ್ ಪಂದ್ಯಾವಳಿಗಳು ಅಬುದಾಬಿಯಲ್ಲಿ ನಡೆಯುತ್ತಿದ್ದು, ಈವರೆಗೆ ಮೂರು ಪಂದ್ಯಗಳನ್ನು ಗೆಲ್ಲುವ ಮೂಲಕ ಪಾಯಿಂಟ್ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಎರಡನೇ ಸ್ಥಾನದಲ್ಲಿದೆ.

ಮೊದಲ ಪಂದ್ಯವನ್ನು ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಜಯ ಸಾಧಿಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ, ಎರಡನೇ ಪಂದ್ಯವನ್ನು ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ಪರಾಭವಗೊಂಡಿತ್ತು. ಮೂರನೇ ಪಂದ್ಯವನ್ನು ಮುಂಬೈ ಇಂಡಿಯನ್ಸ್ ವಿರುದ್ಧ ಗೆಲುವು ಕಂಡಿತ್ತು. ಶನಿವಾರ ನಡೆದ ನಾಲ್ಕನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಗೆಲ್ಲುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಒಟ್ಟು 6 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...